ಹಾಸನ : ರಾಜ್ಯಕ್ಕೆ ಅಕ್ಕಿ ನೀಡದ ನಡೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನ ಕಾರರು ಕೈಯಲ್ಲಿ ಖಾಲಿ ತಟ್ಟೆ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಶಾಸಕ ಶಿವಲಿಂಗೇಗೌಡ ಮಾತನಾಡಿ, ಫುಡ್ ಕಾರ್ಪೋರೇಶನ್ ಆಫ್ ಇಂಡಿಯಾ ಮೂಲಕ ಆಹಾರದ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ತಂದಿದ್ದ ಯೋಜನೆಗೆ ಇಲ್ಲದ ಸಬೂಬು ಹೇಳಿ ರಾಜ್ಯಕ್ಕೆ ಕೇಂದ್ರ ಅನ್ಯಾಯ ಮಾಡುತ್ತಿದೆ ಎಂದು ಗುಡುಗಿದರು. ಒಕ್ಕೂಟ ವ್ಯವಸ್ಥೆಯಲ್ಲಿ ಕೊಟ್ಟು ತೆಗೆದುಕೊಳ್ಳುವ ಪದ್ಧತಿ ಹೊಂದಿದ್ದಾರೆ ಆದರೆ,
ರಾಜ್ಯದಿಂದ ಕೇಂದ್ರಕ್ಕೆ ಕೋಟ್ಯಂತರ ರೂಪಾಯಿ ಟ್ಯಕ್ಸ್ ರೂಪದಲ್ಲಿ ಹಣ ಪಡೆದು ಕರ್ನಾಟಕ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿರುವ ಕೇಂದ್ರ ಸರಕಾರದ ನಡೆ ಖಂಡನೀಯ ನಮ್ಮ ಹಣ ಪಡೆದು ನಮೆಗೆ ವಂಚಿಸುವ ಕೇಂದ್ರ ಸರ್ಕಾರಕ್ಕೆ ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯಕ್ಕೆ ಅಕ್ಕಿ ವಿತರಣೆಯಲ್ಲಿ ತೋರಿರುವ ಮಲತಾಯಿ ಧೋರಣೆಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಬಿಜೆಪಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು