ಮಂಗಳೂರು: ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ಮಂಗಳೂರಿನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಆರಂಭವಾಗಿದ್ದು, ಮಂಗಳೂರಿನ ಪುರಭವನ ಬಳಿಯ ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ಮಡೆಸುತ್ತಿದ್ದಾರೆ. ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜನೆ ಮಾಡಲಾಗಿದ್ದು, ದ.ಕ ಜಿಲ್ಲೆಯ ಎಂಟು ಕ್ಷೇತ್ರಗಳ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ಬಿಜೆಪಿ ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಎಂಎಲ್ ಸಿ ಪ್ರತಾಪ ಸಿಂಹ ನಾಯಕ್ ಭಾಗಿಯಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗಿ ಸಾಧ್ಯತೆ ಇದೆ. ಇನ್ನೂ ಪ್ರತಿಭಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ.
![Demo](https://prajatvkannada.com/wp-content/uploads/2023/08/new-Aston-Band.jpeg)