ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕಹಳ್ಳಿ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ನಿರ್ದೇಶಕ ಗುರುಪ್ರಸಾದ್ 3 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದು, ಅವರ ಮೃತದೇಹ ಅಪಾರ್ಟ್ಮೆಂಟ್ ಪ್ಲಾಟ್ ಪತ್ತೆಯಾಗಿದೆ.
ಇನ್ನೂ ನವೆಂಬರ್ 2ರಂದು ಗುರುಪ್ರಸಾದ್ ಹುಟ್ಟುಹಬ್ಬ. ಈ ಬೆನ್ನಲ್ಲೇ ಅವರ ಸಾವಿನ ಸುದ್ದಿ ಚಿತ್ರರಂಗದ ಮಂದಿಗೆ ಶಾಕ್ ಕೊಟ್ಟಿದೆ. ಮೂರು ದಿನಗಳ ಹಿಂದೆ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆಯಿಂದ ಸ್ಥಳೀಯ ನಿವಾಸಿಗಳಿಗೆ ವಾಸನೆ ಬರತೊಡಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಬಾಗಿಲನ್ನು ತೆರೆಯಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ.
ಗುರುಪ್ರಸಾದ್ ಅವರು ಸಾಲದ ಬಾಧೆಯಿಂದ ಬಳಲುತ್ತಿದ್ದರು. ಅವರು ನಿರ್ದೇಶನ ಮಾಡಿದ್ದ ಇತ್ತೀಚೆಗಿನ ಸಿನಿಮಾ ‘ರಂಗನಾಯಕ’ ಹೀನಾಯ ಸೋಲು ಕಂಡಿತ್ತು. ‘ರಂಗನಾಯಕ’ ಸಿನಿಮಾದ ಫ್ಲಾಪ್ ಬಳಿಕ ಗುರುಪ್ರಸಾದ್ ಸಾಲಗಳಿಗೆ ಸಿಲುಕಿದ್ದರು. ಮಾತ್ರವಲ್ಲದೆ ಕೆಲ ತಿಂಗಳ ಹಿಂದೆ ಗುರುಪ್ರಸಾದ್ ಎರಡನೇ ಮದುವೆ ಸಹ ಆಗಿದ್ದರು ಎನ್ನಲಾಗುತ್ತಿದೆ. ಗುರುಪ್ರಸಾದ್ ಅವರು ಸಾಲಗಾರರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.