ಬೆಂಗಳೂರು: ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿ ಸಂಪೂರ್ಣ ಭಾರತದ ಆತಿಥ್ಯದಲ್ಲಿ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಆಯೋಜನೆ ಆಗಲಿದಗ್ದು, ಬಹುನಿರೀಕ್ಷಿತ ಟೂರ್ನಿಯು ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ನಡೆಯಲಿದೆ. ಈ ಬಗ್ಗೆ ಮಾತನಾಡಿರುವ ಆಸ್ಟ್ರೇಲಿಯಾದ ದಿಗ್ಗಜ ಹಾಗೂ ಮಾಜಿ ಆರಂಭಿಕ ಬ್ಯಾಟರ್ ಮ್ಯಾಥ್ಯೂ ಹೇಡೆನ್, ಆತಿಥೇಯ ಟೀಮ್ ಇಂಡಿಯಾ ಆಯ್ಕೆ ಮಾಡಿಕೊಳ್ಳಬೇಕಾದ 15 ಆಟಗಾರರ ಬಲಿಷ್ಠ ತಂಡವನ್ನು ಪ್ರಕಟ ಮಾಡಿದ್ದಾರೆ.
ಏಷ್ಯಾ ಕಪ್ 2023 ಟೂರ್ನಿಗೆ ಬಿಸಿಸಿಐ ಈಗಾಗಲೇ ಪ್ರಕಟ ಮಾಡಿರುವ 17 ಆಟಗಾರರ ತಂಡದಲ್ಲಿ ಸ್ಥಾನ ಪಡೆಯದ ಸಂಜು ಸ್ಯಾಮ್ಸನ್ಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಕೊಟ್ಟಿರುವ ಹೇಡೆನ್, ಪರಿಣತ ಸ್ಪಿನ್ನರ್ಗಳಾದ ಯುಜ್ವೇಂದ್ರ ಚಹಲ್ ಮತ್ತು ಕುಲ್ದೀಪ್ ಯಾದವ್ ಅವರನ್ನು ಹೊರಗಿಟ್ಟು ಅಚ್ಚರಿ ಮೂಡಿಸಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ನ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿರುವ ಹೇಡೆನ್, ರೋಹಿತ್ ಶರ್ಮಾ ಸಾರಥ್ಯದ ತಮ್ಮ ಆಯ್ಕೆಯ 15 ಆಟಗಾರರ ಬಲಿಷ್ಠ ಭಾರತ ತಂಡವನ್ನು ಹೆಸರಿಸಿದ್ದಾರೆ
ಏಷ್ಯಾ ಕಪ್ಗೆ ತಂಡ ಪ್ರಕಟವಾಗಿದೆ
ಆಗಸ್ಟ್ 30ರಿಂದ ಸೆಪ್ಟೆಂಬರ್ 17ರವರೆಗೆ ಶ್ರೀಲಂಕಾ ಮತ್ತು ಪಾಕಿಸ್ತಾನದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ 2023ರ ಸಾಲಿನ ಏಷ್ಯಾ ಕಪ್ ಏಕದಿನ ಕ್ರಿಕೆಟ್ ಟೂರ್ನಿ ಸಲುವಾಗಿ ಟೀಮ್ ಇಂಡಿಯಾ ಆಯ್ಕೆ ಸಮಿತಿ ಆಗಸ್ಟ್ 21ರಂದು ಭಾರತ ತಂಡವನ್ನು ಪ್ರಕಟ ಮಾಡಿದೆ. ರೋಹಿತ್ ಶರ್ಮಾ ಕ್ಯಾಪ್ಟನ್ಸಿ ಪಡೆದಿದ್ದು, ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಉಪನಾಯಕನ ಜವಾಬ್ದಾರಿ ಹೊತ್ತಿದ್ದಾರೆ. ಉಳಿದಂತೆ ತಂಡದಲ್ಲಿ ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದುಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಮತ್ತು ಪ್ರಸಿದ್ಧ್ ಕೃಷ್ಣ ಅವರಿದ್ದು, ಏಕೈಕ ಬ್ಯಾಕಪ್ ಆಟಗಾರನಾಗಿ ಪ್ರತಿಭಾನ್ವಿತ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಇದ್ದಾರೆ.