ಬೆಂಗಳೂರು ;– ಎಂಪಿ ಎಲೆಕ್ಷನ್ ಚುನಾವಣೆ ಸಂಬಂಧ ಚರ್ಚಿಸಲು ಆಗಸ್ಟ್ 2 ರಂದು ಸಭೆ ಕರೆದಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, 2024ರ ಲೋಕಸಭೆ ಚುನಾವಣೆಗೆ ನಾವು ಕ್ರಿಯಾ ಯೋಜನೆ ರೂಪಿಸಬೇಕಿದೆ. ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾನದಂಡಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.
ಆಗಸ್ಟ್ 2ರಂದು ಸಭೆ ನಡೆಯಲಿದ್ದು, ಸಭೆಗೆ ಎಲ್ಲ ಹಿರಿಯ ನಾಯಕರನ್ನು ದೆಹಲಿಗೆ ಕರೆಸಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಾಭಿಪ್ರಾಯಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಈ ಬಾರಿ ಗರಿಷ್ಠ ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ತಂತ್ರ ರೂಪಿಸಿದೆ ಎಂದರು.
![Demo](https://prajatvkannada.com/wp-content/uploads/2023/08/new-Aston-Band.jpeg)