ಕೇಂದ್ರದಲ್ಲಿ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಯನ್ನು ತಡೆಯುವುದಾಗಿ ಡಿಕೆಎಂಕೆ ಪಕ್ಷ ಲೋಕಸಭಾ ಪ್ರಾಣಾಳಿಕೆಯಲ್ಲಿ ಹೊರಡಿಸಿರುವುದನ್ನು ವಿರೋಧಿಸಿ ಬೆಂಗಳೂರು ನಗರ ಜಿಲ್ಲೆಯ ಆನೆಕಲ್ ತಾಲೂಕಿನ ಗಡಿಭಾಗ ಅತ್ತಿಬೆಲೆಯಲ್ಲಿ ಕನ್ನಡ ಒಕ್ಕೂಟದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ವಾಟಳ್ ನಾಗರಾಜ್ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ನಟ ಕಮಲ್ ಹಾಸನ್ ಗೆ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮೇಕೆದಾಟು ಯೋಜನೆ ವಿರೋಧಿಸಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಯೋಜನೆಗೆ ಅಡೆತಡೆ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನು ವಿರೋಧಿಸುತ್ತೇನೆ ಎಂದಿದ್ದಾರೆ.
ಮೇಕೆದಾಟು ಯೋಜನೆಯಲ್ಲಿ ಕನ್ನಡದ ನಟರೂ ಬೀದಿಗೆ ಇಳಿದು ಹೋರಾಟ ಮಾಡಬೇಕು ಜೊತೆಗೆ ಸ್ಟಾಲಿನ್ ಅವರನ್ನು ರಜನಿಕಾಂತ್, ಕಮಲ್ ಹಾಸನ್ ಭೇಟಿ ಮಾಡಿ ಯೋಜನೆಗೆ ತಡೆ ನೀಡಬಾರದು ಎಂದು ಮನವಿ ಮಾಡಬೇಕು. ಹಾಗೆ ಮಾಡದೇ ಹೋದರೆ ಇಬ್ಬರೂ ಕರ್ನಾಟಕಕ್ಕೆ ಬರಬಾರದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.