ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ ವಾರದಿಂದ ಮತ್ತೆ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ ಎಚ್ಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.