ಬೆಂಗಳೂರು: ಬೆಂಗಳೂರಿನ ಹೆಚ್ ಬಿಆರ್ ಲೇಔಟ್ ನಲ್ಲಿ ಮೆಟ್ರೋ ಪಿಲ್ಲರ್ ಕುಸಿದು ಸಂಭವಿಸಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ. ಗೋವಿಂದಪುರ ಠಾಣೆ ಪೊಲೀಸರು ತನಿಖೆ ಪೂರ್ಣಗೊಳಿಸಿ ಚಾರ್ಜ್ಶೀಟ್ ಸಿದ್ಧಪಡಿಸಿದ್ದು, ಪೊಲೀಸರು ಕೆಲವೇ ದಿನಗಳಲ್ಲಿ ಚಾರ್ಜ್ಶೀಟ್ ಸಲ್ಲಿಸಲಿದ್ದಾರೆ. ಗೋವಿಂದಪುರ ಪೊಲೀಸರು FIRನಲ್ಲಿರುವ ಎಲ್ಲಾ 9 ಮಂದಿ ವಿರುದ್ಧ ಚಾರ್ಜ್ಶೀಟ್ ಸಿದ್ಧಪಡಿಸಿದ್ದಾರೆ. ಐಐಟಿ ಸಲ್ಲಿಕೆ ಮಾಡಿದ ಎರಡು ವರದಿಗಳು, ಎಫ್ಎಸ್ಎಲ್ ರಿಪೋರ್ಟ್,
ತಜ್ಞರ ವರದಿ ಆಧಾರದ ಮೇಲೆ ಚಾರ್ಜ್ಶೀಟ್ ತಯಾರಿಸಲಾಗಿದೆ. ಸೈಟ್ ಇಂಜಿನಿಯರ್, ಮೆಟ್ರೋ ಅಧಿಕಾರಿಗಳು, ಗುತ್ತಿಗೆದಾರರು, ಸೈಟ್ನಲ್ಲಿ ಕೆಲಸ ಮಾಡ್ತಿದ್ದ ಸಿಬ್ಬಂದಿ, ಅಧಿಕಾರಿಗಳು ಸೇರಿದಂತೆ ಎಲ್ಲರ ವಿಚಾರಣೆ ನಡೆಸಿ ಗೋವಿಂದಪುರ ಪೊಲೀಸರು ಹೇಳಿಕೆ ದಾಖಲಿಸಿದ್ದಾರೆ. ಕೆಲವೇ ದಿನಗಳಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಲಿದ್ದಾರೆ. ತಜ್ಞರ ವರದಿಗಳ ಅಭಿಪ್ರಾಯ ಪರಿಶೀಲನೆ, ಹಾಗೂ ತಾಂತ್ರಿಕವಾಗಿ ತನಿಖೆ ನಡೆಸಿ ಲೋಪಕ್ಕೆ ಕಾರಣ ಏನು? ಯಾರ ವೈಫಲ್ಯ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಈ ಎಲ್ಲಾ ಅಂಶಗಳನ್ನ ತನಿಖಾ ತಂಡ ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಿದೆ