ಜಮ್ಮು-ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ಯೋಧ ತೀವ್ರ ಗಾಯಗೊಂಡಿರುವ ಘಟನೆ ನಡೆದಿದೆ.
ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ದಾಳಿ ನಡೆದಿದೆ ಎಂದು ವರದಿ ತಿಳಿಸಿದೆ. ಈ ವೇಳೆ ಭದ್ರತಾ ಸಿಬ್ಬಂದಿ ಕೂಡ ಉಗ್ರರ ಮೇಲೆ ಪ್ರತಿದಾಳಿ ನಡೆಸಿದ್ದಾರೆ.
ಸದ್ಯ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯುತ್ತಿದೆ. ರಜೌರಿಯ ಹಳ್ಳಿಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ಮಾಡಿದ್ದಾರೆ.
ಘಟನೆಯ ಬಳಿಕ ಭದ್ರತಾ ಪಡೆಗಳು ಭಯೋತ್ಪಾದಕರಿಗಾಗಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.
ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಶನಿವಾರ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಅರೆಸೇನಾ ಪಡೆಗಳು ಮತ್ತು ಗುಪ್ತಚರ ಸಂಸ್ಥೆಗಳೊಂದಿಗೆ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಜಂಟಿ ಭದ್ರತಾ ಪರಿಶೀಲನಾ ಸಭೆಯಲ್ಲಿ ಚಾಲ್ತಿಯಲ್ಲಿರುವ ಭದ್ರತಾ ಸನ್ನಿವೇಶವನ್ನು ಪರಿಶೀಲಿಸಿದ್ದರು. ಇದಾದ ಎರಡು ದಿನಗಳಲ್ಲಿ ಈ ದಾಳಿ ನಡೆದಿದೆ.