ಬೆಂಗಳೂರು: ಕನಕಪುರದಲ್ಲಿ ಮಂಡ್ಯ ಯುವಕ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ರಾಜೀನಾಮೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿದ್ದು, ಧರ್ಮ ರಕ್ಷಣೆಯ ಹೆಸರಲ್ಲಿ ಬಿಜೆಪಿ ಪಕ್ಷ ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ನಡೆದ ವ್ಯಕ್ತಿ ಸಾಕ್ಷಿ. ಈ ಹತ್ಯೆಯ ಹೊಣೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಂತಹ ಅಸಮರ್ಥ ಗೃಹ ಸಚಿವರೇ ಹೊರಬೇಕು’ ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕ ಇಂತಹ ಅಸಮರ್ಥ, ಅದಕ್ಷ ಮತ್ತು ಬೇಜವಾಬ್ದಾರಿ ಗೃಹಸಚಿವರನ್ನು ಎಂದೂ ನೋಡಿರಲಿಲ್ಲ. ತನ್ನ ಇಲಾಖೆಯ ಮೇಲೆ ನಿಯಂತ್ರಣ ಇಲ್ಲದ ಈ ಸಚಿವರಿಗೆ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸಲು ಸಾಧ್ಯವೇ? ಮೊದಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತು ಹಾಕಿ’ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.