ಬೆಂಗಳೂರು: ಕೋಲಾರಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಡಿಜಿಟಲ್ ನರ್ವ್ ಸೆಂಟರ್ ವೀಕ್ಷಿಸಿದ್ದಾರೆ.
ಟಾಟಾ ಪ್ರೈಮರಿ ಮತ್ತು ಸೆಕೆಂಡರಿ ಹೆಲ್ತ್ ಕೇರ್ ಟ್ರಾನ್ಸ್ ಫಾರ್ ಮೆಷಿನ್ ಕೇಂದ್ರಕ್ಕೆ ಭೇಟಿ ನೀಡಿದ್ದು ಸಚಿವರಿಗೆ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ ಸಾಥ್ ನೀಡಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಚಿವರು ಭಾಗವಹಿಸಲಿದ್ದಾರೆ.