ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಅನ್ಯಕೋಮಿನವರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಾಕಲಾಗಿತ್ತು. ಇದರ ಬೆನ್ನಲ್ಲೇ ಕೋಮುಗಲಭೆ ನಡೆದ ಸ್ಥಳಕ್ಕೆ ಇಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ.
ಬೆಂಕಿ ಬಿದಿದ್ದ ಬೈಕ್ ಶೋರೂಂ, ಅಂಗಡಿಗಳಿಗೆ ಹೆಚ್ಡಿ ಕುಮಾರಸ್ವಾಮಿ ಅವರು ಭೇಟಿ, ಪರಿಶೀಲನೆ ನಡೆಸಿದರು. ಘಟನೆ ಬಗ್ಗೆ ಅಧಿಕಾರಿಗಳು ಮತ್ತು ಅಂಗಡಿ ಮಾಲೀಕರಿಂದ ಮಾಹಿತಿ ಪಡೆದರು.ಭೇಟಿ ವೇಳೆ ಗಲಭೆಯಿಂದ ಹಾನಿಗೊಳಗಾದ ಅಂಗಡಿಗಳ ಮಾಲೀಕರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಅವರ ಅಳಲು ಆಲಿಸಿದರು. ಈ ಸಂದರ್ಭದಲ್ಲಿ ಕುಮಾರಸ್ವಾಮಿಯವರಿಗೆ ಮಾಜಿ ಶಾಸಕರಾದ ಸುರೇಶ್ಗೌಡ, ರವೀಂದ್ರ ಶ್ರೀಕಂಠಯ್ಯ, ಅನ್ನದಾನಿ ಸಾಥ್ ನೀಡಿದರು.