ಬೆಂಗಳೂರು: ಕಲುಷಿತ ನೀರು ಸೇವಿಸಿ ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಕಚೇರಿಯಲ್ಲಿ ಇಲಾಖೆಯ ಉನ್ನತಾಧಿಕಾರಿಗಳ ಪ್ರಥಮ ಸಭೆ ನಡಸಿದ ಅವರು, ಕುಡಿಯುವ ನೀರೇ ವಿಷವಾದರೆ ಜನ ಬದುಕುವುದಾದರೂ ಹೇಗೆ? ರಾಜ್ಯದಲ್ಲಿ ಜಲ ಮೂಲಗಳಿಗೆ, ಕೆರೆ, ನದಿ, ರಾಜಕಾಲುವೆಗಳಿಗೆ ವಿಷಯುಕ್ತ ತ್ಯಾಜ್ಯ ಹರಿಸುತ್ತಿರುವ ಕಾರ್ಖಾನೆಗಳ ವಿರುದ್ಧ ಕಾನೂನು ರೀತ್ಯ ಕ್ರಮ ಏಕೆ ಜರುಗಿಸಿಲ್ಲ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.
ಇಂದು ಕುಡಿಯುವ ನೀರು ಕಲುಷಿತವಾಗಿದೆ, ಪ್ರಾಣವಾಯು ನಾವು ಉಸಿರಾಡುವ ಗಾಳಿಯೂ ವಿಷಯುಕ್ತವಾಗುತ್ತಿದೆ. ಹೊಸದಿಲ್ಲಿಯಲ್ಲಿ ಬಂದಿರುವ ಸ್ಥಿತಿ ರಾಜ್ಯಕ್ಕೂ ಬರಬಾರದು, ಈ ನಿಟ್ಟಿನಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಜವಾಬ್ದಾರಿ ಗುರುತರವಾಗಿದೆ.
ಇಲಾಖೆ ಮತ್ತು ಅಧಿಕಾರಿಗಳು ಈಗ ನಿರ್ಲಕ್ಷ್ಯ ವಹಿಸಿದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.