ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಹಾಗೂ ಮಜರಾಹೊಸಹಳ್ಳಿ ಗ್ರಾಮಗಳಿಗೆ ಸೋಮವಾರದಿಂದಲೇ ಟ್ರ್ಯಾಕ್ಟರ್ ಮೂಲಕ ಕುಡಿಯುವ ನೀರು ಪೂರೈಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭರವಸೆ ನೀಡಿದ ನಂತರ ಕಳೆದ 3 ದಿನಗಳಿಂದ ಗ್ರಾಮಸ್ಥರು ನಡೆಸುತ್ತಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹ ಹಿಂಪಡೆದರು.
ನಗರದ ತಹಶೀಲ್ದಾರ್ ಕಚೇರಿ ಎದುರು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ನೇತೃತ್ವದಲ್ಲಿ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದರು.ದೊಡ್ಡಬಳ್ಳಾಪುರ ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ತ್ಯಾಜ್ಯ ನೀರಿನಿಂದ ಮಜರಾಹೊಸಹಳ್ಳಿ, ದೊಡ್ಡತುಮಕೂರು ಭಾಗದ ಅಂತರ್ಜಲ ಕಲುಷಿತವಾಗಿದೆ. ಶುದ್ಧ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಹಲವು ವರ್ಷಗಳಿಂದ ಹೋರಾಟ ನಡೆಸಿದರೂ ಪ್ರಯೋಜನವಾಗಿಲ್ಲ ಎಂದು ಧರಣಿನಿರತರು ಸಚಿವರ ಗಮನ ಸೆಳೆದರು.
ಈ ವೇಳೆ ಮಾತನಾಡಿದ ಸಚಿವ ಕೆ.ಎಚ್.ಮುನಿಯಪ್ಪ ಅವರು, ಒಂದು ತಿಂಗಳೊಳಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗು ವುದು. ಕೆರೆಯ ವಸ್ತುಸ್ಥಿತಿ, ಒಳಚರಂಡಿ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣ ಕುರಿತಂತೆ ಜಿಲ್ಲಾಧಿಕಾರಿಯಿಂದ ವರದಿ ಪಡೆಲಾಗು ವುದು. ಶಾಶ್ವತ ಪರಿಹಾರ ರೂಪಿಸುವವರೆಗೂ ಟ್ರ್ಯಾಕ್ಟರ್ ಮೂಲಕ ಕುಡಿಯುವ ನೀರು ಪೂರೈಸಲಾಗುವುದು ಎಂದು ಆಶ್ವಾಸನೆ ನೀಡಿದರು. ಸಚಿವ ಕೆ.ಹೆಚ್ ಮುನಿಯಪ್ಪ ಮತ್ತು ಶಾಸಕ ಧೀರಜ್ ಮುನಿರಾಜು ಅಸ್ವಸ್ಥಗೊಂಡಿದ್ದ ಸಂಚಾಲಕ ವಸಂತ್ ಮತ್ತು ರಮೇಶ್ ಅವರಿಗೆ ಎಳನೀರು ಕುಡಿಸಿದರು. ಸಚಿವರ ಭರವಸೆ ಬಳಿಕ ಉಪವಾಸ ಸತ್ಯಾಗ್ರಹ ಹಿಂ