ಚೆನ್ನೈ: ತಮಿಳುನಾಡಿಗೆ 3 ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಮೇಶ್ವರಂನಲ್ಲಿರುವ ಶ್ರೀ ಅರುಲ್ಮಿಗು ರಾಮನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಧ್ಯಾಹ್ನ 2.10ಕ್ಕೆ ಹೆಲಿಕಾಪ್ಟರ್ ಮೂಲಕ ರಾಮೇಶ್ವರಂ ಪಕರುಂಬುವಿನ ಅಮೃತಾನಂದ ಶಾಲಾ ಆವರಣಕ್ಕೆ ಪ್ರಧಾನಿ ಮೋದಿ ಆಗಮಿಸಿದರು.
ಅಲ್ಲಿಂದ ಮಧ್ಯಾಹ್ನ 3.10ಕ್ಕೆ ಅಗ್ನಿತೀರ್ಥದಲ್ಲಿ ಪುಣ್ಯಸ್ನಾನ ಮಾಡಿದರು. ನಂತರ ದೇವಸ್ಥಾನದಲ್ಲಿ ನಡೆಯುತ್ತಿದ್ದ ರಾಮಾಯಣ ಪಥ ಮತ್ತು ಭಜನಾ ಸಂಧ್ಯಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ‘ಪ್ರಾಣ ಪ್ರತಿಷ್ಠಾ’ದವರೆಗೆ 11 ದಿನಗಳ,
ವ್ರತದಲ್ಲಿರುವ ಪ್ರಧಾನಿ ಮೋದಿ ಶನಿವಾರ ತಿರುಚಿರಾಪಳ್ಳಿಗೆ ಆಗಮಿಸಿದರು. ಇದಕ್ಕೂ ಮುನ್ನ ಪ್ರಧಾನಿಯವರು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ ತಮ್ಮ ಭೇಟಿಯ ವೇಳೆ ಮೋದಿ ಅವರು ದೇವಾಲಯದ ಆವರಣದಲ್ಲಿ ‘ಆಂಡಾಳ್’ ಎಂಬ ಆನೆಯ ಬಳಿಯಿಂದ ಆಶೀರ್ವಾದ ಪಡೆದರು.