ಬೆಂಗಳೂರು: ಸಚಿವ ರಾಮಲಿಂಗಾ ರೆಡ್ಡಿ ಭೇಟಿಯ ನಂತರ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)ಪ್ರತಿಕ್ರಿಯೆ ನೀಡಿದ್ದು, ಪಕ್ಷದ ತೀರ್ಮಾನಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಬದ್ಧರಾಗಿರುತ್ತಾರೆ. ರಾಮಲಿಂಗಾ ರೆಡ್ಡಿ ಸತತ 8 ಬಾರಿ ಶಾಸಕರಾಗಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ರಾಮಲಿಂಗಾ ರೆಡ್ಡಿ, ನನಗೆ ಸಚಿವ ಸ್ಥಾನ ಇರಲಿಲ್ಲ. ನಾವೆಲ್ಲಾ ಪಕ್ಷ ಬಿಟ್ಟು ಹೋಗಿದ್ದರೆ ಏನೋನೋ ಆಗಿರುತ್ತಿದ್ದೆವು. ಕೆಲವೊಮ್ಮೆ ಪಕ್ಷದ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರಬೇಕಾಗುತ್ತೆ ಎಂದು ಹೇಳಿದರು.
ಹೀಗಾಗಿ ಖಾತೆಗಳ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಬಹಳಷ್ಟು ಬಾರಿ ನೋವು ತಿಂದಿದ್ದೇವೆ, ಪಕ್ಷವನ್ನೂ ಕಟ್ಟಿದ್ದೇವೆ. ಮನುಷ್ಯ ಅಂದ ಮೇಲೆ ರಾಜಕೀಯ ಅಂದ ಮೇಲೆ ಹಿರಿತನ ಬರುತ್ತೆ. ಕೆಲವೊಮ್ಮೆ ರಾಜಕೀಯದಲ್ಲಿ ಏನೂ ಮಾಡಲು ಆಗಲ್ಲ. ಜನರಿಗೆ ಕೊಟ್ಟ ಭರವಸೆ ಈಡೇರಿಸಬೇಕು ಅಷ್ಟೇ. ಇನ್ನೂ ನನಗೆ ಖಾತೆ ಹಂಚಿಕೆಯ ಪಟ್ಟಿಯೇ ಸಿಕ್ಕಿಲ್ಲ ಎಂದು ಹೇಳಿದರು.