ಬೆಂಗಳೂರು: ಸಚಿವ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಬಗ್ಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು.
ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು.