ಬೆಂಗಳೂರು: ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸುವ ಮೂಲಕ ಮಾನ್ಯ ವಸತಿ ಸಚಿವರು ಹಾಗೂ ಸ್ಥಳೀಯ ಶಾಕರರಾದ ಶ್ರೀ ವಿ.ಸೋಮಣ್ಣ ರವರು ಚಾಲನೆ ನೀಡಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಶ್ಚಿಮ ವಲಯದ ಕಲ್ಯಾಣ ಇಲಾಖೆ ವತಿಯಿಂದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ವಾರ್ಡ್ ಗಳಲ್ಲಿ ತರಬೇತಿ ಪಡೆದ ಸುಮಾರು 433 ಅರ್ಹ ಪಲಾನುಭವಿಗಳಿಗೆ ಹೊಲಿಗೆ ಯಂತ್ರಗಳ ವಿತರಣೆ ಮಾಡಿದರು.
ಪಾಲಿಕೆಯ ಪಶ್ಚಿಮ ವಲಯದ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಹೊಲಿಗೆ ತರಬೇತಿ ಕಾರ್ಯಕ್ರಮದಡಿ ಆಸಕ್ತ ಮಹಿಳೆಯರು ಉಚಿತವಾಗಿ ಹೊಲಿಗೆ ತರಬೇತಿಯನ್ನು ಪಡೆದುಕೊಂಡು ತನ್ಮೂಲಕ ಉಚಿತವಾಗಿ ನೀಡಲಾಗುವ ಹೊಲಿಗೆ ಯಂತ್ರದ ಸಹಾಯದಿಂದ ಸ್ವಯಂ ಉದ್ಯೋಗ ಪ್ರಾರಂಭಿಸಿ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳುವಂತೆ ಉತ್ತೇಜಿಸುವುದೇ ಈ ಕಾರ್ಯಕ್ರಮ ಉದ್ದೇಶವಾಗಿರುತ್ತದೆ ಎಂದು ವಸತಿ ಸಚಿವರಾದ ವಿ.ಸೋಮಣ್ಣ ತಿಳಿಸಿದರು.
ಕಾರ್ಯಕ್ರಮದ ವೇಳೆ ವಿಶೇಷ ಆಯುಕ್ತರಾದ ಶ್ರೀ ರೆಡ್ಡಿ ಶಂಕರ ಬಾಬು, ವಲಯ ಜಂಟಿ ಆಯುಕ್ತರಾದ ಲೋಕನಾಥ್ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.