ಬೆಂಗಳೂರು: ಮತಗಟ್ಟೆ ತರಬೇತಿಯಲ್ಲಿ (polling booth training) ಉದ್ಧಟತನ ಆರೋಪ ಹಿನ್ನೆಲೆ ಮಹಿಳಾ ಇನ್ಸ್ಪೆಕ್ಟರ್ ಅಮಾನತು (suspended) ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಯಿಂದ ಆದೇಶ ಹೊರಡಿಸಲಾಗಿದೆ. ಭವ್ಯಾ ಅಮಾನತುಗೊಳಗಾದ ಮಹಿಳಾ ಇನ್ಸ್ಪೆಕ್ಟರ್.
ಮಂಗಳವಾರ ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ತರಬೇತಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ತರಬೇತಿಗೆ ಹಾಜರಾಗದೆ ಇನ್ಸ್ಪೆಕ್ಟರ್ ಭವ್ಯ ಪೇಪರ್ ಓದುತ್ತಾ ಕುಳಿತಿದ್ದರು. ನೋಡಲ್ ಅಧಿಕಾರಿ ಹಾಗೂ ಸೆಕ್ಟರ್ ಅಧಿಕಾರಿ ಪ್ರಶ್ನಿಸಿದಾಗ ಉದ್ಧಟತನ ಮೆರೆದಿದ್ದಾರೆ ಎನ್ನಲಾಗಿದೆ. ನಾನು ಮಾಡುತ್ತಿರುವುದು ಸರಿ, ತರಬೇತಿ ಕೊಡುವುದು ನಿಮ್ಮ ಕೆಲಸ. ಆದರೆ ತರಬೇತಿ ಪಡೆಯುವುದು ಬಿಡುವುದು ನಮ್ಮಿಷ್ಟ ಎಂದಿದ್ದಾರೆ.