ವಿಪಕ್ಷಗಳ ಸರ್ಕಾರಗಳಿರುವ ರಾಜ್ಯಗಳ ಮೇಲೆ ಇಡಿ IT ದಾಳಿ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಹೌದು.. ಕರ್ನಾಟಕ ಸರ್ಕಾರವನ್ನು ಬುಡಮೇಲು ಮಾಡುವ ಯತ್ನ ನಡೆದಿದೆ ವಾಲ್ಮೀಕಿ ಹಗರಣ ವಿಚಾರಣೆ ವೇಳೆ ಬಲವಂತದ ಹೇಳಿಕೆ ಕೊಡಿಸಿದ್ರು ಸರ್ಕಾರದ ಪ್ರಮುಖರ ಹೆಸರನ್ನು ಹೇಳುವಂತೆ ಬಲವಂತ ಮಾಡಲಾಗಿದೆ ಇಲ್ಲದಿದ್ರೆ ED ಪವರ್ ಎನೆಂದು ತೋರಿಸ್ತೇವೆಂದು ಬೆದರಿಕೆಯೊಡ್ಡಿದ್ದಾರೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದ್ದಕ್ಕೆ ವಿಪಕ್ಷಗಳ ಟಾರ್ಗೆಟ್ ಎಂದರು.
ಹಾಗೆ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಮಾಡಿದ ಆರೋಪ ಈಗಾಗಲೇ ಎಸ್ಐಟಿ ತನಿಖೆ ಮಾಡಿಸುತ್ತಿರುವ ರಾಜ್ಯ ಸರ್ಕಾರ ಇದರ ಬೆನ್ನಲ್ಲೇ ಮಾಜಿ ಸಚಿವ ನಾಗೇಂದ್ರರನ್ನು ಬಂಧಿಸಿದ್ದ ಇಡಿ, ಇಡಿ ಅಧಿಕಾರಿಗಳ ತನಿಖೆಯನ್ನು ಖಂಡಿಸುತ್ತಿರುವ ರಾಜ್ಯ ಕಾಂಗ್ರೆಸ್ , ಐಟಿ ಸಂಸ್ಥೆಯನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ತಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.