ಸರ್ಕಾರದ ಶಕ್ತಿ ಯೋಜನೆ ದುರುಪಯೋಗವಾಗುತ್ತಿರುವ ಆರೋಪ ಕೇಳಿಬಂದಿದೆ. ಮಹಿಳಾ ಪ್ರಯಾಣಿಕರು ಇಲ್ಲದೇ ಇದ್ದರೂ ಟಿಕೆಟ್ ಬರೆಯುವುದು, ಒಂದಕ್ಕಿಂತ ಹೆಚ್ಚು ಟಿಕೆಟ್ ನೀಡಿ ದುಡ್ಡು ಮಾಡುವ ಕೃತ್ಯ ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು, ಇದೀಗ ಅಂಥ ನಿರ್ವಾಹಕರ ವಿರುದ್ಧ ಕಠಿಣ ಕ್ರಮಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ.
ಬಸ್ನಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಇಲ್ಲದಿದ್ದರೂ ಹೆಚ್ಚು ಟಿಕೆಟ್ ವಿತರಣೆಯಾಗುತ್ತಿರುವ ಆರೋಪಗಳು ಕೇಳಿಬಂದ ಬೆನ್ನಲ್ಲೇ ಕೆಎಸ್ಆರ್ಟಿಸಿ ಸೇರಿದಂತೆ ಇತರ ಸಾರಿಗೆ ನಿಗಮಗಳು ಎಚ್ಚೆತ್ತುಕೊಂಡಿದ್ದು, ಇದೀಗ ನಿರ್ವಾಹಕರಿಗೆ ಎಚ್ಚರಿಕೆ ನೀಡಿವೆ. ಜತೆಗೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೆಕೆಆರ್ಟಿಸಿ ಈಗಾಗಲೇ ಆದೇಶ ಹೊರಡಿಸಿದೆ.
ಮಹಿಳೆಯರಿಗೆ ಉಚಿತ ಟಿಕೆಟ್ ನೀಡದಿದ್ದರೆ ಕಂಡಕ್ಟರ್ಗಳು ದಂಡ ಕಟ್ಟಬೇಕಾಗುತ್ತದೆ. ತಪ್ಪಿತಸ್ಥ ಕಂಡಕ್ಟರ್ಗಳಿಗೆ ಯಾವ ರೀತಿ ಶಿಕ್ಷೆ ವಿಧಿಸಬೇಕು ಎಂಬ ಕುರಿತು ಕೆಕೆಆರ್ಟಿಸಿ ಈಗಾಗಲೇ ಆದೇಶ ಹೊರಡಿಸಿದೆ.
ಪ್ರಕರಣದಲ್ಲಿ ಸೋರಿಕೆ ಮೊತ್ತದ ಮೇಲೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವುದು.
ಮಹಿಳಾ ಉಚಿತ ಟಿಕೆಟ್ ವಿತರಿಸದೇ ಇದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದು.
2 ಕ್ಕಿಂತ ಹೆಚ್ಚಿನ ಟಿಕೆಟ್ ನೀಡದೇ ಇರುವ ಪಕ್ಷದಲ್ಲಿ ನಿಯಮಾನುಸಾರ
ಕ್ರಮ ಕೈಗೊಳ್ಳುವುದು.
ಇಂತಹ ಪ್ರಕರಣದಲ್ಲಿ ಪ್ರಯಾಣಿಕರಿಂದ ದಂಡ ವಸೂಲಿ ಮಾಡದೇ, ನ್ಯೂನತೆಗಳ ವಿವರಗಳೊಂದಿಗೆ ನಿರ್ವಾಹಕರಿಗೆ ಮೆಮೋ ನೀಡಿ ಕ್ರಮಕೈಗೊಳ್ಳುವುದು.