ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಸಾರ್ವಜನಿಕರು ಸೇರಿ ರಬಕವಿ ಮಹಿಷವಾಡಗಿ ಬ್ರಿಡ್ಜ್ ಕಾಮಗಾರಿ ಬೇಗ ಮುಗಿಸಿ ಕೊಡಿ ಎಂದು ಶಾಸಕ ಲಕ್ಷ್ಮಣ ಸವದಿ ಅವರಿಗೆ ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದರು. ಕಾಮಗಾರಿ ಮುಗಿಸಲು ಎಷ್ಟು ವರ್ಷ ಬೇಕು ನಿಮಗೆ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು,
ರಬಕವಿ ಮಹಿಷವಾಡಗಿ ಬ್ರಿಡ್ಜ್ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ರವಿ ಗಡಾದ. ರವಿ ಜಮಖಂಡಿ. ಪ್ರವೀಣ ಹಜಾರೆ. ಮಾಹಾದೇವ ದುಪದಾಳ. ಸಂಜಯ ತೇಲಿ. ಆನಂದ ಜುಗಳಿ. ಶ್ರೀಶೈಲ ದಲಾಲ. ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.
ಪ್ರಕಾಶ ಕುಂಬಾರ
ಬಾಗಲಕೋಟೆ