ಬೆಂಗಳೂರು: ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿಗೆ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಆಗಿದ್ದು ಚಾಲೇಂಜಿಂಗ್ ಸ್ಟಾರ್ ದರ್ಶನ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಕೆಲ ತಿಂಗಳುಗಳಿಂದ ಮೊಣಕಾಲು ನೋವಿಂದ ಬಳಲುತ್ತಿದ್ದ ಶಾಸಕ.ಸತೀಶ್ ರೆಡ್ಡಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಈಗ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ . ಈ ಹಿನ್ನೆಲೆಯಲ್ಲಿ ನಟ ದರ್ಶನ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸತೀಶ್ ರೆಡ್ಡಿ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.