ಪ್ರಧಾನಿಯಾದ ಮೊದಲ ದಿನವೇ ಮೋದಿ ರೈತರಿಗೆ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ. ಹೌದು ನಿನ್ನೆ ಪ್ರಧಾನಿ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 3ನೇ ಬಾರಿಗೆ ಪ್ರಧಾನಿಯಾಗಿ ಕಚೇರಿಗೆ ಆಗಮಿಸಿದ ಬೆನ್ನಲ್ಲೇ ಮೋದಿ ರೈತರ ಖಾತೆಗೆ ಬರೋಬ್ಬರಿ 20,000 ಕೋಟಿ ರೂಪಾಯಿ ಜಮೆ ಮಾಡಿದೆ.
ಕಿಸಾನ್ ನಿಧಿ ಸಮ್ಮಾನ್ 17ನೇ ಕಂತನ್ನು ಮೋದಿ ಬಿಡುಗಡೆ ಮಾಡಿದ್ದಾರೆ.ಬರೋಬ್ಬರಿ 9.3 ಕೋಟಿ ರೈತರ ಖಾತೆಗೆ 20 ಸಾವಿರ ಕೋಟಿ ರೂಪಾಯಿ ಜಮೆ ಮಾಡಿದ್ದಾರೆ. 3ನೇ ಅವಧಿಯ ಮೊದಲ ದಿನವೇ ರೈತರಿಗೆ ಬಂಪರ್ ಗಿಫ್ಟ್ ಘೋಷಿಸಿದ ಪ್ರಧಾನಿ ಮೋದಿ ತಮ್ಮ ಸರ್ಕಾರ ರೈತರ ಏಳಿಗೆ ಹಾಗೂ ಬೆಂಬಲಕ್ಕೆ ಸದಾ ನಿಲ್ಲಲಿದೆ ಅನ್ನೋ ಸಂದೇಶ ಸಾರಿದ್ದಾರೆ. ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ರೈತರ ಕಲ್ಯಾಣಕ್ಕಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ ಎಂದು ರೈತರಗೆ ಹಣ ಬಿಡುಗಡೆ ಮಾಡಿ ಮೋದಿ ಹೇಳಿದ್ದಾರೆ.