ಅಬುಧಾಬಿ: ಅಬುಧಾಬಿಯಲ್ಲಿ ನಿರ್ಮಾಣವಾದ ಮೊದಲ ಹಿಂದು ದೇವಾಲಯವನ್ನು ಫೆಬ್ರುವರಿ 14 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಸ್ವಾಮಿನಾರಾಯಣ ಸಂಸ್ಥೆ ತಮ್ಮ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಅಬುಧಾಬಿಯಲ್ಲಿ ನಿರ್ಮಾಣವಾದ ಮೊದಲ ಹಿಂದು ದೇವಾಲಯವನ್ನು ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್) ನಿರ್ಮಿಸಿದ್ದು, ಇದು ಯುಎಇಯ ಮೊದಲ ಸಾಂಪ್ರದಾಯಿಕ ಕಲ್ಲಿನ ಹಿಂದೂ ದೇವಾಲಯವಾಗಿದೆ.
ಈ ದೇವಸ್ಥಾನವನ್ನು ಅಬುಧಾಬಿಯ ಮುರೇಖಾ ಜಿಲ್ಲೆಯಲ್ಲಿ 27 ಎಕರೆ ಜಾಗದಲ್ಲಿ ನಿರ್ಮಿಸಲಾಗಿದೆ. ಉದ್ಘಾಟನೆ ಹಿನ್ನೆಲೆ ಬಿಎಪಿಎಸ್ನ ಆಧ್ಯಾತ್ಮಿಕ ಗುರು ಸ್ವಾಮಿ ಮಹಂತ್ ಸ್ವಾಮಿ ಮಹಾರಾಜ್ ಅವರು ಯುಎಇಗೆ ಆಗಮಿಸಿದ್ದಾರೆ.
ಮಂದಿರದ ಉದ್ಘಾಟನೆಯನ್ನು ‘ಸೌಹಾರ್ದತೆಯ ಹಬ್ಬ’ದಂತೆ ಆಚರಿಸಲಾಗುತ್ತದೆ. ನಂಬಿಕೆಯನ್ನು ಬಲಪಡಿಸುವುದು, ಎಲ್ಲಾ ತಲೆಮಾರುಗಳು ಮತ್ತು ಹಿನ್ನೆಲೆಗಳುಳ್ಳ ಜನರ ನಡುವೆ ಸಾಮರಸ್ಯವನ್ನು ಬೆಳೆಸುವುದು ಈ ಉದ್ಘಾಟನಾ ಕಾರ್ಯಕ್ರಮದ ಧ್ಯೇಯವಾಗಿದೆ ಎಂದು ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರ ಈ ಭೇಟಿ ಭಾರತ ಮತ್ತು ಯುಎಇ ನಡುವಿನ ನಿಕಟ ಸಂಬಂಧವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು