ಬೆಂಗಳೂರು: ಭಾರತ ಕ್ರಿಕೆಟ್ ತಂಡದ ವೇಗಿ ಮೊಹಮ್ಮದ್ ಶಮಿ (Mohammed Shami) 2024 ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024)ನಿಂದ ಹೊರಗುಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಎಡ ಪಾದದ ಗಾಯದಿಂದ ಹೊರಗುಳಿದಿರುವ ಟೀಂ ಇಂಡಿಯಾ ಬೌಲರ್ ಸೋಮವಾರ ಲಂಡನ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ
ಈ ಕುರಿತು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಶಮಿ ಪೋಸ್ಟ್ವೊಂದನ್ನು ಹಾಕಿದ್ದಾರೆ. ಆಸ್ಪತ್ರೆಯ ಬೆಡ್ನಲ್ಲಿರುವ ಶಮಿ, ನನ್ನ ಅಕಿಲ್ಸ್ ಸ್ನಾಯುರಜ್ಜು ಮೇಲೆ ಯಶಸ್ವಿ ಹೀಲ್ ಆಪರೇಷನ್ ಆಗಿದೆ. ಚೇತರಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಆದರೆ ನನ್ನ ಪಾದಗಳು ಮೊದಲಿನಂತಾಗಲು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಭಾರತದಲ್ಲಿ ನಡೆದ 2023 ರ ಐಸಿಸಿ ಕ್ರಿಕೆಟ್ ವಿಶ್ವಕಪ್ನಲ್ಲಿ ಶಮಿ ಮಿಂಚಿದ್ದರು. ಮುಂದಿನ ತಿಂಗಳಿಂದ ಐಪಿಎಲ್ ಪ್ರಾರಂಭವಾಗಲಿದ್ದು, ಗುಜರಾತ್ ಟೈಟಾನ್ಸ್ ವೇಗಿ ಆಟದಿಂದ ಹೊರಗುಳಿಯಬಹುದು ಎನ್ನಲಾಗಿದೆ.