ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಐದಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ. ಇಲೆಕ್ಟ್ರಿಕಲ್ ಅಂಗಡಿ, ಬೇಕರಿ, ಬೊಂಬೆ ಅಂಗಡಿ, ಫೂಟ್ವೇರ್ ಮತ್ತು ಹೊಟೇಲ್ಗೆ ಬೆಂಕಿ ಬಿದ್ದಿದ್ದು, ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಫೂಟ್ವೇರ್ ಅಂಗಡಿಯಿಂದ ದಟ್ಟಹೊಗೆ ಆವರಿಸಿದ್ದು, ದಟ್ಟವಾದ ಹೊಗೆಗೆ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸುಮಾರು 30 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಹಾನಿಯಾಗಿವೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಹಿರೇಕೆರೂರು ಶಾಸಕ ಯುಬಿ ಬಣಕಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಂಸಭಾವಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.