ಬೆಂಗಳೂರು : ಕಳೆದ 10 ದಿನಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ಹಿಂದೆ ಹೇಳಿದ್ದೆ ಜುಲೈ ತಿಂಗಳಲ್ಲಿ ಮಳೆಯಾಗುತ್ತೆ ಅಂತ ಹವಾಮಾನ ಇಲಾಖೆ ಹೇಳಿತ್ತು. ಜೂನ್ ತಿಂಗಳಲ್ಲಿ 56 % ಮಳೆ ಕೊರತೆ ಇತ್ತು. ಒಂದು ವಾರದ ಹಿಂದೆ 29% ಇಳಿದಿತ್ತು. ನಿನ್ನೆಗೆ 19% ಮಳೆ ಕೊರತೆ ಕಡಿಮೆ ಆಗಿದೆ. ವಾಡಿಕೆಗಿಂತ ಹೆಚ್ಚು ಮಳೆ ಬಂದ ಕಾರಣ ಶೇ 14% ಕೊರತೆ ಇದೆ ಎಂದು ವಿಕಾಸಸೌಧದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಕಠಿಣ ಪರಿಶ್ರಮವೊಂದೇ ಬದುಕಿನಲ್ಲಿ ಯಶಸ್ಸು ಗಳಿಸಲು ಕೀಲಿಕೈ” ಎಂದು ಸಚಿವ ಕೃಷ್ಣಭೈರೇಗೌಡ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ. ಭಾನುವಾರ ಕುವೆಂಪುನಗರ ವಾರ್ಡ್ನಲ್ಲಿ “ನಮ್ಮೂರ ಹೆಮ್ಮೆ-2023” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉತ್ತಮ ಅಂಕಗಳಿಸಿದ 400ಕ್ಕೂ ಹೆಚ್ಚು ಎಸ್ಎಸ್ಎಲ್ಸಿ-ಪಿಯುಸಿ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು.
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಜನ ಖುಷಿಯಾಗಿದ್ದಾರೆ ಎಂದು ಸಚಿವ ಕೃಷ್ಣಭೈರೇಗೌಡ ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ದಿನೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಬಡ-ಮಧ್ಯಮ ವರ್ಗದ ಜನ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಅವರ ಸಂಕಷ್ಟಕ್ಕೆ ಸಹಾಯಹಸ್ತ ಚಾಚುವ ಕೆಲಸಕ್ಕೆ ಮುಂದಾಯಿತು.
ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದ ಜನ ಖುಷಿಯಾಗಿದ್ದಾರೆ. ನಾವು ಅಧಿಕಾರಕ್ಕೆ ಬಂದು ನಾಲ್ಕು ವರ್ಷದ ನಂತರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಬಹುದಿತ್ತು. ಆದರೆ, ಅಧಿಕಾರಕ್ಕೆ ಬಂದು ಎರಡೇ ತಿಂಗಳಲ್ಲಿ ಎಲ್ಲ ಆಶ್ವಾಸನೆಗಳನ್ನೂ ಈಡೇರಿಸುವ ಮೂಲಕ ಕೊಟ್ಟ ಮಾತನ್ನು ಕಾಂಗ್ರೆಸ್ ಉಳಿಸಿಕೊಂಡಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.