ಬೆಂಗಳೂರು: ಮೂಡಾ ಹಗರಣದಿಂದಾಗಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಒದಗಿದ್ದು ಸಿದ್ದರಾಮಯ್ಯ ಮುಂದಿನ ನಡೆ ಏನು ಇಂದು ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿರುವ ಸಿಎಂ ಸಿದ್ದರಾಮಯ್ಯ.
ಹೌದು .. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಕೆಗೆ ಸಿದ್ದತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವಂತೆಯೂ ಮನವಿ ಮಾಡಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ದೊರೆತಿದೆ.
ಹೈಕೋರ್ಟ್ ತಡೆಯಾಜ್ಞೆ ನೀಡಿದರ ಸಿದ್ಧರಾಮಯ್ಯಗೆ ತನಿಖೆಯಿಂದ ರಿಲೀಫ್ ಸಿಕ್ಕಂತಾಗಲಿದೆ.ಇನ್ನು ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮತಿ ಎತ್ತಿ ಹಿಡಿದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಇದನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಸಿಎಂ ಸಿದ್ಧತೆ
ರಾಜ್ಯಪಾಲರ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದರೂ ಸಿದ್ದರಾಮಯ್ಯಗೆ ರಿಲೀಫ್ ಒಂದು ವೇಳೆ ರಿಲೀಫ್ ಸಿಗದಿದ್ದರೆ ತಕ್ಷಣ ಸುಪ್ರೀಂಕೋರ್ಟ್ ಮೆಟ್ಟಿಲೇರಲೂ ಸಿಎಂ ಪರ ವಕೀಲರು ಸಿದ್ಧತೆ ಸಿದ್ದರಾಮಯ್ಯ ಹಾಗೂ ಅವರ ಟೀಂ ಮುಂದಿನ ಕಾನೂನು ಹೋರಾಟಕ್ಕೆ ಅಣಿಯಾಗಿದೆ.