ಮಹಿಳೆಯೊಬ್ಬರ ಮೇಲೆ ಒಂದು ತಿಂಗಳ ಕಾಲ ಅತ್ಯಾಚಾರ ನಡೆಸಿ ಚಿತ್ರಹಿಂಸೆ ನೀಡುತ್ತಿದ್ದ ಆರೋಪಿಯ ಮನೆಯನ್ನು ಸ್ಥಳೀಯರು ಜೆಸಿಬಿಯಿಂದ ಧ್ವಂಸ ಮಾಡಿದ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ.
ಅಧಿಕಾರಿಗಳು ಇಂದು ಸ್ಥಳಕ್ಕೆ ಆಗಮಿಸಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಮನೆಯನ್ನು ನೆಲಸಮಗೊಳಿಸಿದ್ದಾರೆ. ಆರೋಪಿಯ ಮನೆಯನ್ನು ಜೆಸಿಬಿಯಿಂದ ಕೆಡವುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಆರೋಪಿ ಅಯಾನ್ ಪಠಾಣ್ ಎಂಬಾತ ತನ್ನ ನೆರೆ ಮನೆಯಲ್ಲಿ ವಾಸಿಸುತ್ತಿದ್ದ 23 ವರ್ಷದ ಮಹಿಳೆಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ಒಂದು ತಿಂಗಳ ಕಾಲ ಚಿತ್ರಹಿಂಸೆ ನೀಡಿದ್ದನು . ಕೂಲಿ ಕೆಲಸ ಮಾಡುತ್ತಿದ್ದ ಅಯಾನ್ ಮಹಿಳೆಯ ತಾಯಿಯ ಹೆಸರಿನಲ್ಲಿರುವ ಆಸ್ತಿಯ ಮೇಲೆ ಕಣ್ಣಿಟ್ಟಿದ್ದನು. ಆಕೆಯ ಆಸ್ತಿಯನ್ನು ತನಗೆ ನೀಡಲು ನಿರಾಕರಿಸಿದ ಕಾರಣಕ್ಕೆ ಮಹಿಳೆಯನ್ನು ಹೊಡೆದು ಆಕೆಯ ಕಣ್ಣು ಮತ್ತು ಬಾಯಿಗೆ ಮೆಣಸಿನ ಪುಡಿಯನ್ನು ತುಂಬಿದ್ದ. ಅಷ್ಟೇ ಅಲ್ಲದೇ ಹೊರಗಡೆ ಆಕೆಯ ಧ್ವನಿ ಕೇಳದೇ ಇರಲು ಬಾಯಿಗೆ ಅಂಟುಗಳನ್ನು ಹಾಕಿದ್ದನು ಎಂದು ತಿಳಿದು ಬಂದಿದೆ.
ಅಷ್ಟೇ ಅಲ್ಲದೇ ತನ್ನ ಸಂಬಂಧಿಕರ ನೆರವಿನಿಂದ ಮಹಿಳೆಗೆ ಹಲವು ಬಾರಿ ದೈಹಿಕ ಹಿಂಸೆ ನೀಡಿದ್ದ. ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ದೂರು ದಾಖಲಿಸಿದ ನಂತರ ಅಯಾನ್ನನ್ನು ಬಂಧಿಸಲಾಗಿದೆ.