ಬೆಂಗಳೂರು ;– ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಒಬ್ಬರಿಗೆ ಮಾತ್ರ ನೋಟಿಸ್ ನೀಡಲಾಗಿದೆ ಎಂದು ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,ರಾಜ್ಯ ಶಿಸ್ತು ಸಮಿತಿಯಿಂದ ಒಬ್ಬರಿಗೆ ಮಾತ್ರ ನೋಟಿಸ್ ನೀಡಲಾಗಿದೆ. ಹಾಲಿ ಶಾಸಕ ಮತ್ತು ಸಂಸದರಿಗೆ ನೋಟಿಸ್ ಕೊಡುವ ಅಧಿಕಾರ ನಮ್ಮ ಸಮಿತಿಗೆ ಇಲ್ಲ. ಅದು ಕೇಂದ್ರಿಯ ಶಿಸ್ತು ಸಮಿತಿ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ನಾವು ಮಾಜಿ ಶಾಸಕ ರೇಣುಕಾಚಾರ್ಯ ಅವರಿಗೆ ಮಾತ್ರ ನೋಟಿಸ್ ನೀಡಿದ್ದೇವೆ. ಅವರಿಗೆ ಇಂದಿನ ಸಭೆಗೆ ಹಾಜರಾಗಲು ತಿಳಿಸಲಾಗಿತ್ತು. ಆದರೆ ಇಂದು ಅವರು ಬರಲಿಲ್ಲ. ನಂತರ ಬಂದು ವಿವರಣೆ ಕೊಡುತ್ತೇನೆ ಎಂದು ಹೇಳಿದ್ದಾರೆ. ಅವರು ಬಂದು ವಿವರಣೆ ನೀಡದಿದ್ದರೆ ಮುಂದೆ ಏನು ಮಾಡಬೇಕು ಅನ್ನೋದನ್ನು ನೋಡುತ್ತೇವೆ ಎಂದು ಕ್ರಮದ ಎಚ್ಚರಿಕೆ ನೀಡಿದರು.