ಮೈಸೂರು ನಗರದ ಹೊರವಲಯದಲ್ಲಿ ಮಕ್ಕಳಿಗಾಗಿ ಸ್ಕೇಟಿಂಗ್ ರಿಂಗ್ ನಿರ್ಮಾಣಕ್ಕಾಗಿ ಸಂಸದ ಪ್ರತಾಪಸಿಂಹ ಇಂದು ಗುದ್ದಲಿಪೂಜೆ ನೆರವೇರಿಸಿದರು. ಈ ಸ್ಕೇಟಿಂಗ್ ರಿಂಗ್ ನ್ನು ಬೆಂಗಳೂರಿನ ಮಾದರಿಯಲ್ಲಿ ನಿರ್ಮಿಸಲು ಯೋಜಿಸಿದ್ದು, ಸುಮಾರು ಮೂರೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಮಕ್ಕಳು ಮೊಬೈಲ್,
ಟಿವಿ ನೋಡುವುದರ ಬದಲು ಪೋಷಕರ ಜತೆ ಇಲ್ಲಿ ಸ್ಕೇಟಿಂಗ್ ನಂತಹ ಆಟೋಟ ಚಟುವಟಿಕೆಗಳಲ್ಲಿ ಭಾಗಿಯಾಗಲು ಸಹಕಾ ರಿಯಾಗಿದೆ ಎಂದು ಸಂಸದ ಪ್ರತಾಪಸಿಂಹ ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಕೆ. ಹರೀಶ್ ಗೌಡ, ಮೇಯರ್ ಶಿವಕುಮಾರ್, ನಗರಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಸೇರಿದಂತೆ ಹಲವರು ಹಾಜರಿದ್ದರು.