ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ, ಸಂಸದ ಬಿ ವೈ ರಾಘವೇಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಶಿವಮೊಗ್ಗ ಕ್ಷೇತ್ರದ ವಿವಿಧ ಕೆಲಸಗಳ ವಿಚಾರವಾಗಿ ಭೇಟಿಯಾಗಿ ಮಾತುಕತೆ ನಡೆಸಿದ ಸಂಸದ ರಾಘವೇಂದ್ರ. ಹಾಗೆ ಮಾತನಾಡಿದ ಅವರು ಕಾಂಗ್ರೆಸ್ಗೆ ಸಂಪೂರ್ಣ ಬಹುಮತದ ನಂತರ ಗ್ಯಾರೆಂಟಿ ಅನುಷ್ಠಾನಕ್ಕೆ ತರುತ್ತಿದ್ದಾರೆ. ನಾನು ಸರ್ಕಾರಕ್ಕೆ ಆಗ್ರಹಿಸೋದು ಅಂದ್ರೆ ಕೊಟ್ಟಿರುವ ಭರವಸರ ಈಡೇರಿಸುವ ಭರದಲ್ಲಿ ಜನರಿಗೆ ಹೊರೆ ಆಗಬಾರದು. ಒಂದು ಕಡೆ ಹೊರೆ ಇನ್ನೊಂದು ಬರೆ ಕೊಡುವ ಕೆಲಸ ಆಗಬಾರದು ಎಂದು ಹೇಳಿದರು.