ದೇವನಹಳ್ಳಿ: ಹೊಸಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಸಿದ್ದಾರೆ. ಹೊಸಕೋಟೆ ನಗರದಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ರ್ಯಾಲಿ ನಡೆಸಿ ತಾಲೂಕು ಕಛೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಅತ್ಯಂತ ಸಿರಿವಂತ ರಾಜಕಾರಣಿಗಳಲ್ಲಿ ಒಬ್ಬರಾದ ಎಂಟಿಬಿ ನಾಗರಾಜ್ ಈ ಬಾರಿ 1510 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದಾರೆ. ಕಳೆದ ಬಾರಿಯ ಚುನಾವಣೆಯ ವೇಳೆ 1015 ಕೋಟಿ ಘೋಷಣೆ ಮಾಡಿದ್ದರು. ಎಂಟಿಬಿ ನಾಗರಾಜ್ ಕಳೆದ ನಾಲ್ಕು ವರ್ಷದಲ್ಲಿ 495 ಕೋಟಿ ರೂಪಾಯಿ ಆಸ್ತಿ ಹೆಚ್ಚಳ ಮಾಡಿಕೊಂಡಿದ್ದಾರೆ.
ಎಂಟಿಬಿ ನಾಗರಾಜ್ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನನ್ನ ಬದಲುನ ಪುತ್ರನಿಗೆ ಟಿಕೆಟ್ ನೀಡಬೇಕೆಂದು ಕೋರಿದ್ದರು. ಆದರೆ ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಎಂಟಿಬಿ ನಾಗರಾಜ್ಗೆ ಮಣೆ ಹಾಕಿದೆ. 2004ರಲ್ಲಿ ಹೊಸಕೋಟೆ ಕ್ಷೇತ್ರಕ್ಕೆ ಬಂದು ತಾಲೂಕಿನ ಜನರ ಸೇವೆಯನ್ನು 19 ವರ್ಷ ಮಾಡಿದ್ದೇನೆ. ಈಗ ರಾಜಕೀಯ ನಿವೃತ್ತಿ ಪಡೆದು, ಮಗ ಜನಸೇವೆಗೆ ಮುಂದಾಗಲಿ ಎಂದು ಬಯಸಿ ಟಿಕೆಟ್ ಬೇಡ ಎಂದು ಪತ್ರ ಬರೆದಿದ್ದೆ ಎಂದು ಎಂಟಿಬಿ ನಾಗರಾಜ್ ಹೇಳಿಕೊಂಡಿದ್ದರು.
ಎಂಟಿಬಿ ನಾಗರಾಜ್ ಹೊಸಕೋಟೆ ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ. ಈ ಬಾರಿಯೂ ಅಧಿಕ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ದೇವ ಮೂಲೆಯ ಕೊನೆಯ ಗ್ರಾಮದಿಂದ ಪ್ರಚಾರ ಆರಂಭಿಸಿದರೆ ಗೆಲುವು ಖಚಿತ ಎಂಬ ನಂಬಿಕೆ ಇದೆ. ಹೀಗಾಗಿ ತಾಲೂಕಿನ ದಳಸಗೆರೆ ಗ್ರಾಮದಿಂದ ಪ್ರಚಾರ ಆರಂಭಿಸಿದ್ದಾರೆ.