ಬಾಗಲಕೋಟೆ : ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ನೆರವು ನೀಡಿ ಸಚಿವ ಸಂತೋಷ್ ಲಾಡ್ ಮಾನವೀಯತೆ ಮೆರೆದಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರ ಗ್ರಾಮದ ಬಳಿ ಘಟನೆ ನಡೆದಿದೆ.
ಟ್ರ್ಯಾಕ್ಟರ್ ಹಿಂಬದಿಯಿಂದ ಬರುತ್ತಿದ್ದ ಬೈಕ್ ಸವಾರ ಸತೀಶ್ ವೆಂಕಪ್ಪ ಮಾದರ ಆಯತಪ್ಪಿ ಕೆಳಗೆ ಬಿದಿದ್ದು, ಮೊಳ್ಕಾಲು ನೋವಾಗಿ ತೀವ್ರ ಗಾಯವಾಗಿತ್ತು.
ಜಮಖಂಡಿಯಿಂದ ಅದೇ ಮಾರ್ಗವಾಗಿ ಬರುತ್ತಿದ್ದ ಕಾರ್ಮಿಕ ಸಚಿವ ಸಂತೋಷ ಲಾಡ್ ಸವಾರ ಬಿದ್ದಿರೋದನ್ನು ಕಂಡು, ಆತನನ್ನು ತಮ್ಮ ಕಾರಲ್ಲೇ ಗಾಯಾಳು ಬೈಕ್ ಸವಾರನನ್ನು ಲೋಕಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ತೋರಿದ್ದಾರೆ.
ಲೋಕಾಪುರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಸಾಗಿಸಿದ್ದಾರೆ. ಜೊತೆಗೆ ಲೋಕಾಪುರ ಆಸ್ಪತ್ರೆ ಸಿಬ್ಬಂದಿ ತುರ್ತು ಚಿಕಿತ್ಸೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
