ಕೋಲಾರ : ಮುಳಬಾಗಿಲು ಗ್ರಾಮಾಂತರ ಪೊಲೀಸರು ಜೂಜು ಅಡ್ಡೆ ಮೇಲೆ ದಾಳಿ ಮಾಡಿ ಮೂವರನ್ನು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಆವಣಿ ಬಳಿಯ ರಾಮಾಪುರ ಗ್ರಾಮದ ಕೆರೆಯ ಅಂಗಳದಲ್ಲಿ ಗುಂಪೊಂದು ಇಸ್ಪೀಟು ಆಡುತ್ತಿದ್ದು ಖಚಿತ ಮಾಹಿತಿ ಮೇರೆಗೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ ಐ ಕುಮಾರಿ ಮಮತ ನೇತೃತ್ವದ ಸಿಬ್ಬಂದಿ ತಂಡ ದಾಳಿ ನಡೆಸಿದ್ದು, ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಅಮುಜಾನ್, ಮಂಜುನಾಥ್, ವೆಂಕಟೇಶಪ್ಪಎಂಬುವವರು ಬಂಧಿತರಾಗಿದ್ದು, ಪಣಕ್ಕೆ ಇಟ್ಟಿದ್ದ ನಗದು ಹಣವನ್ನು ವಶಪಡಿಸಿ ಕೊಂಡಿದ್ದು ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.