ಬೆಂಗಳೂರು ;- ಸಚಿವರಾಗಿದ್ದಾಗ ಹನಿಟ್ರ್ಯಾಪ್ ಮಾಡಲು ಮುನಿರತ್ನ ಸ್ಟುಡಿಯೋ ಇಟ್ಟು ಕೊಂಡಿದ್ದರು ಎಂದು ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಗಂಭೀರ ಆರೋಪ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕರೆಯಿಸುವುದು ಹನಿಟ್ರ್ಯಾಪ್ ಮಾಡುವುದು ಹೆದರಿಸುವುದು. ಜೆ.ಪಿ.ಪಾರ್ಕ್, ಡಾಲರ್ಸ್ ಕಾಲೋನಿಯಲ್ಲಿ ಇದಕ್ಕಾಗಿ ಸ್ಟುಡಿಯೋ ಇದೆ. ಅವರು ಸಿನಿಮಾ ನಿರ್ಮಾಪಕರಲ್ಲವೇ. ಹೀಗಾಗಿ ಹನಿಟ್ರ್ಯಾಪ್ ಮಾಡಿಸಿ ಹೆದರಿಸುತ್ತಾರೆ ಎಂದರು.
ಮುನಿರತ್ನಗೆ ಚುನಾವಣೆ ಎದುರಿಸುವುದು ಹೇಗೆ ಎಂದು ಕೇಳಿದೆವು. ನಿಮ್ಮದು ಈಸ್ಟ್ಮನ್ ಕಲರ್ ಪಿಕ್ಚರ್ ಇದೆ ತೋರಿಸಲಾ? ಇಲ್ಲ ಕೆಲಸ ಮಾಡುತ್ತೀರಾ ಅಂತಾ ಮುನಿರತ್ನ ಹೆದರಿಸುತ್ತಿದ್ದರು. ಮುನಿರತ್ನ ನಿರ್ಮಾಪಕನಾಗಿ ಮಾಡಿದ ಮೊದಲ ಚಿತ್ರ ಆಂಟಿ ಪ್ರೀತ್ಸೆ. ಹೀಗಾಗಿ ಮುನಿರತ್ನ ಸಚಿವರಾದ ಮೇಲೂ ಬರೀ ಆಂಟಿಗಳೇ ಇರುತ್ತಿದ್ದರು. ವಿಕಾಸಸೌಧ, ವಿಧಾನಸೌಧ ಚೇಂಬರ್ನಲ್ಲೆಲ್ಲಾ ಬರೀ ಆಂಟಿಗಳೇ ಇರುತ್ತಿದ್ದರು ಎಂದು ಆರೋಪಿಸಿದರು.
ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗುತ್ತಿದ್ದು, ಇದಕ್ಕಾಗಿ ಆಡಳಿತರೂಢ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ. ಅದರಲ್ಲೂ ಮುಖ್ಯವಾಗಿ ಬಿಬಿಎಂಪಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಡಿಕೆ ಶಿವಕುಮಾರ್ ಸದ್ದಿಲ್ಲದೇ ಆಪರೇಷನ್ ಹಸ್ತ ಮಾಡಿದ್ದಾರೆ. ಹೌದು…ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ಬೆಂಬಲಿಗರನ್ನು ಕಾಂಗ್ರೆಸ್ಗೆ ಸೆಳೆಯುವಲ್ಲಿ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಯಶಸ್ವಿಯಾಗಿದ್ದಾರೆ.