ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇದು ಗಂಭೀರ ಪ್ರಕರಣ ಆದ್ದರಿಂದ ಅಷ್ಟು ಸುಲಭಕ್ಕೆ ಜಾಮೀನು ಸಿಗುತ್ತಿಲ್ಲ. ಇತ್ತೀಚೆಗಷ್ಟೇ ದರ್ಶನ್ ಅವರು ಬೇಲ್ ಸಲುವಾಗಿ ಅರ್ಜಿ ಸಲ್ಲಿಸಿದ್ದರು
. ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಲಾಗಿದೆ. ಸದ್ಯ ಅವರು ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಎ1 ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ಸೆಪ್ಟೆಂಬರ್ 25ಕ್ಕೆ ಮುಂದೂಡಿಕೆ ಆಗಿದೆ.
ಜಾಮೀನು ಪಡೆಯಲು ದರ್ಶನ್ ಮತ್ತು ಪವಿತ್ರಾ ಗೌಡ ಇನ್ನಷ್ಟ ದಿನ ಕಾಯುವುದು ಅನಿವಾರ್ಯ ಆಗಿದೆ. ಅವರಿಬ್ಬರ ಜಾಮೀನು ಅರ್ಜಿ ವಿಚಾರಣೆಯ ದಿನಾಂಕವನ್ನು ಮುಂದೂಡಲಾಗಿದೆ. ಸೆಪ್ಟೆಂಬರ್ 27ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಪವಿತ್ರಾ ಗೌಡ ಜಾಮೀನು ಜಾಮೀನು ಅರ್ಜಿ ವಿಚಾರಣೆ ಸೆ.25ಕ್ಕೆ ಮುಂದೂಡಿಕೆಯಾಗಿದೆ.