ರಾಯ್ಪುರ: ಮದುವೆಗೆ ಗಿಫ್ಟ್ (Marriage Gift) ಕೊಟ್ಟ ಹೋಮ್ ಥಿಯೇಟರ್ (Home Theatre) ಬ್ಲಾಸ್ಟ್ ಆಗಿ ನವವಿವಾಹಿತ ಹಾಗೂ ಆತನ ಸಹೋದರ ಸೇರಿ ಇಬ್ಬರು ಸಾವನ್ನಪ್ಪಿರುವ ಪ್ರಕರಣಕ್ಕೆ ಇದೀಗ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಹೌದು. ಪ್ರಕರಣ ಸಂಬಂಧ ಪೊಲೀಸರು ಗಿಫ್ಟ್ ಕೊಟ್ಟವನನ್ನು ಬಂಧಿಸಿದ್ದು, ತನಿಖೆ ನಡೆಸಿದಾಗ ಅಚ್ಚರಿಯ ವಿಚಾರವೊಂದು ಬೆಳಕಿಗೆ ಬಂದಿದೆ. ಬಂಧಿತನನ್ನು ಸರ್ಜು ಎಂದು ಗುರುತಿಸಲಾಗಿದ್ದು, ಈ ಘಟನೆ ಛತ್ತೀಸ್ಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ನಡೆದಿದೆ
ಏನದು ಟ್ವಿಸ್ಟ್..?: ಸ್ಫೋಟಗೊಂಡ ಹೋಮ್ ಥಿಯೇಟರ್ ಅನ್ನು ವಧುವಿನ ಮಾಜಿ ಪ್ರಿಯತಮ ಉಡುಗೊರೆಯಾಗಿ ನೀಡಿರುವುದಾಗಿ ತನಿಖೆಯ ವೇಳೆ ಬಯಲಾಗಿದೆ. ವರನ ಕೊಲೆ ಮಾಡುವ ಉದ್ದೇಶದಿಂದ ಗಿಫ್ಟ್ ಆಗಿ ಕೊಟ್ಟಿರುವುದಾಗಿ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ವಧು ತನ್ನನ್ನು ಬಿಟ್ಟು ಬೇರೆ ಮದುವೆಯಾಗಿರುವುದರ ಮೇಲಿನ ಸಿಟ್ಟಿನಿಂದ ಈ ಐಡಿಯಾ ಮಾಡಿರುವುದಾಗಿ ಹೇಳಿದ್ದಾನೆ. ಹೋಮ್ ಥಿಯೇಟರ್ ಒಳಗಡೆ ಸ್ಫೋಟಕಗಳನ್ನು ಇಟ್ಟು ಯಾವುದೇ ಅನುಮಾನ ಬರದಂತೆ ಪ್ಯಾಕ್ ಮಾಡಿ ಅದನ್ನು ವಧುವಿಗೆ ಉಡುಗೊರೆಯಾಗಿ ನೀಡಿರುವುದಾಗಿ ಪೊಲೀಸರ ಮುಂದೆ ಆರೋಪಿ ತಪ್ಪೊಪ್ಪಿಕ್ಕೊಂಡಿದ್ದಾನೆ.
ನಡೆದಿದ್ದಾದ್ರು ಏನು..?: ವರ ಹೇಮೇಂದ್ರ ಮೇರಾವಿ (22) ಏಪ್ರಿಲ್ 1 ರಂದು ವಿವಾಹವಾಗಿದ್ದರು. ಸೋಮವಾರ ಹೇಮೇಂದ್ರ ಹಾಗೂ ಕುಟುಂಬದ ಇತರ ಸದಸ್ಯರು ತಮ್ಮ ಮನೆ ಕೋಣೆಯೊಳಗೆ ಮದುವೆಗೆ ಬಂದಿದ್ದ ಉಡುಗೊರೆಗಳನ್ನು ಬಿಚ್ಚುತ್ತಿದ್ದರು. ಉಡುಗೊರೆಗಳ ಪೈಕಿ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ (Music System) ಕೂಡಾ ಒಂದಾಗಿತ್ತು. ಅದರ ತಂತಿಯನ್ನು ಎಲೆಕ್ಟ್ರಿಕ್ ಬೋರ್ಡ್ಗೆ ಜೋಡಿಸಿ ಬಳಿಕ ಅದನ್ನು ಆನ್ ಮಾಡಿದಾಗ ಭಾರೀ ಸ್ಫೋಟ ಉಂಟಾಗಿದೆ. ಘಟನೆಯಲ್ಲಿ ಮೇರಾವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಗಮನಿಸಿ: Job Vacancy: ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಕರ್ನಾಟಕ ಉಚ್ಛ ನ್ಯಾಯಾಲಯ ನೇಮಕಾತಿಗೆ ಅರ್ಜಿ ಆಹ್ವಾನ
ಮೇರಾವಿ ಸಹೋದರ ರಾಜ್ಕುಮಾರ್ (30) ಮತ್ತು ಒಂದೂವರೆ ವರ್ಷದ ಬಾಲಕ ಸೇರಿದಂತೆ ಇತರ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಕೌರಾದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ವೇಳೆ ಮೇರಾವಿ ಅವರ ಸಹೋದರ ಸಾವನ್ನಪ್ಪಿದ್ದಾರೆ. ಪ್ರಸ್ತುತ ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದ ಪರಿಣಾಮ ಹೋಮ್ ಥಿಯೇಟರ್ ಸಿಸ್ಟಮ್ ಅನ್ನು ಇರಿಸಲಾಗಿದ್ದ ಕೋಣೆಯ ಮೇಲ್ಛಾವಣಿ ಹಾಗೂ ಗೋಡೆಗಳೇ ಕುಸಿದು ಹೋಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದದಾರೆ.