ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾಳ ಹತ್ಯೆ ಮಾಡಿದ ಆರೋಪಿ ಫಯಾಜ್ ಮುಸ್ಲಿಂ ಆಗಿರುವುದರಿಂದ ಸರ್ಕಾರ ಮೃದು ಧೋರಣೆ ತೋರುತ್ತಿದೆ ಎಂದು ಬಿಜೆಪಿ ಆರೋಪಿಸಲಾಗುತ್ತಿದೆ. ಸರ್ಕಾರಕ್ಕೆ ಅಂಥವರ ರಕ್ಷಣೆ ಮಾಡುವ ಅವಶ್ಯಕತೆ ಏನಿದೆ? ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರಶ್ನೆ ಮಾಡಿದ್ದಾರೆ. ಸದಾಶಿವನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೊಲೆ ಮಾಡಿರುವ ವ್ಯಕ್ತಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆ ಆಗುತ್ತದೆ.
ಇದೇ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೆಲಸ ಮಾಡುತ್ತಿದೆ ಎಂದು ಹೇಳಿದರು.”ಈ ಹಿಂದೆ ಸಿಬಿಐಗೆ ಅನೇಕ ಪ್ರಕರಣಗಳನ್ನು ಕೊಡಲಾಗಿದೆ. ಪ್ರಕರಣದ ತನಿಖೆ ನಡೆಸಲು ನಮ್ಮವರಿಂದ ಆಗಲಿಲ್ಲ ಎಂದರೆ ಸಿಬಿಐ ವಹಿಸಲಾಗುತ್ತಿತ್ತು. ಘಟನೆ ನಡೆದ ಗಂಟೆಯೊಳಗೆ ಆರೋಪಿಯನ್ನು ಹಿಡಿಯಲಾಗಿದೆ” ಎಂದರು. ” ಜಾಲತಾಣಗಳಲ್ಲಿ ನೇಹಾಗಾಗಿ ವೋಟ್ ಹಾಕಿ ಅಂತ ಪೋಸ್ಟ್ಗಳನ್ನು ಹಾಕುತ್ತಿದ್ದಾರೆ.
ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿರುವ ಅರ್ಥ ಕಾಣಿಸುತ್ತಿದೆ. ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ಮಾಡಲು ಹೋಗುವುದಿಲ್ಲ. ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಹಿಂದು, ಮುಸ್ಲಿಂ, ಕ್ರಿಶ್ಚಿಯನ್ ಯಾವುದೇ ಧರ್ಮ, ಜಾತಿಗೆ ಸೇರಿದ್ದರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುವುದಾಗಿ ಈಗಾಗಲೇ ಹೇಳಿದ್ದೇನೆ. ಕಾನೂನು ಬಿಟ್ಟು ಕೆಲಸ ಮಾಡಲು ಆಗುವುದಿಲ್ಲ” ಎಂದು ತಿಳಿಸಿದರು.