ಮುಂಬೈ: ಲಿವ್ ಇನ್ ಪಾರ್ಟ್ನರ್ ಳನ್ನು ಕೊಲೆಗೈದು ಬಳಿಕ ದೇಹವನ್ನು ಪೀಸ್ ಪೀಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು (Mumbai Police) ಬುಧವಾರ ಸಂಜೆ ಬಂಧಿಸಿದ್ದಾರೆ. ಬಂಧಿತನನ್ನು ಮನೋಜ್ ಸಹಾನಿ (56) ಎಂದು ಗುರುತಿಸಲಾಗಿದೆ. ಈತ ಕಳೆದ ಮೂರು ವರ್ಷಗಳಿಂದ ಮೀರಾ ರೋಡ್ ಪ್ರದೇಶದ ಆಕಾಶಗಂಗಾ ಕಟ್ಟಡದ ಬಾಡಿಗೆ ಫ್ಲಾಟ್ನಲ್ಲಿ ಸರಸ್ವತಿ ವೈದ್ಯ ಎಂಬಾಕೆಯೊಂದಿಗೆ ವಾಸವಾಗಿದ್ದ. ಇತ್ತ ಕಟ್ಟಡದ ನಿವಾಸಿಗಳು ಬುಧವಾರ ನಯಾನಗರ ಪೊಲೀಸ್ ಠಾಣೆ (Nayanagar Police Station) ಗೆ ಕರೆ ಮಾಡಿದ್ದು,
ದಂಪತಿಯ ಫ್ಲಾಟ್ನಿಂದ ದುರ್ವಾಸನೆ ಬರುತ್ತಿದೆ ಎಂದು ದೂರಿದ್ದಾರೆ. ಅಂತೆಯೇ ಥಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರಿಗೆ ಭಯಾನಕ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಪ್ರಾಥಮಿಕ ತನಿಖೆಯಿಂದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮುಂಬೈನ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಜಯಂತ್ ಬಜ್ಬಲೆ ಪ್ರತಿಕ್ರಿಯಿಸಿ, ಪೊಲೀಸರು ಮೀರಾ ರೋಡ್ ಪ್ರದೇಶದಲ್ಲಿನ ಸೊಸೈಟಿಯಿಂದ ತುಂಡಾಗಿ ಕತ್ತರಿಸಿದ ಮಹಿಳೆಯ ಶವವನ್ನು ಪತ್ತೆ ಮಾಡಿದ್ದಾರೆ. ಇಲ್ಲಿ ದಂಪತಿ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದರು. ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.