ಬೆಂಗಳೂರು: ಮೀಸಲಾತಿ ವಿಚಾರವಾಗಿ ಕೇಂದ್ರ ಸಚಿವ ಅಮಿತ್ ಶಾ(amith sha) ಮಾತಾಡಿದ್ದಾರೆ. ಆದರೆ ತಮಿಳುನಾಡಿನಲ್ಲಿ ಮೀಸಲಾತಿ ಪ್ರಮಾಣ ಯಾವ ರೀತಿ ಹೆಚ್ಚಳವಾಗಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಹೇಳಿದ್ದಾರೆ. ಶೇಕಡಾ 2ರಷ್ಟು ಹೆಚ್ಚುವರಿ ಮೀಸಲಾತಿ ಕೊಡಿ ಎಂದು ಕೇಳಿರಲಿಲ್ಲ.
ಮುಸ್ಲಿಂ ಸಮುದಾಯ ಮೀಸಲಾತಿ ಕಿತ್ತು ಲಿಂಗಾಯತ, ಒಕ್ಕಲಿಗರು ಮೀಸಲಾತಿ ಕೊಡಿ ಎಂದು ಕೇಳಿರಲಿಲ್ಲ. ಮೀಸಲಾತಿ ವಿಚಾರದಲ್ಲಿ ಯಾರಿಗೂ ಸಮಾಧಾನ ಆಗದಂತೆ ಮಾಡಿದೆ. ರಾಜ್ಯ ಸರ್ಕಾರದ ವಿರುದ್ಧ ಪ್ರತಿಯೊಬ್ಬರೂ ಅಸಮಾಧಾನಗೊಂಡಿದ್ದಾರೆ ಎಂದರು. ಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಇಲಾಖೆ ಆರಂಭಿಸುತ್ತೇವೆ. ಹೂಡಿಕೆಗೆ ಅವಕಾಶ ಮಾಡಿಕೊಡಲು ಅನುಕೂಲ ಮಾಡಿಕೊಡುತ್ತೇವೆ ಎಂದರು.