PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Bombay jayashree: ಪ್ರಜ್ಞಾಹೀನ ಸ್ಥಿತಿಯಲ್ಲಿ ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಪತ್ತೆ

March 24, 2023

Ajith Kumar: ತಮಿಳು ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಂ ನಿಧನ

March 24, 2023

ಹಿಂಡೆನ್ ಬರ್ಗ್ ವರದಿ ಬಳಿಕ ಜಾಕ್ ಡೋರ್ಸಿ ಸಂಪತ್ತಿನ ಮೌಲ್ಯ ಭಾರೀ ಕುಸಿತ

March 24, 2023
Facebook Twitter Instagram
Friday, March 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಮೈಸೂರು-ಕುಶಾಲನಗರ ಹೆದ್ದಾರಿ ಕಾಮಗಾರಿಯನ್ನು 2025 ರೊಳಗೆ ಮುಗಿಸುವುದು ನನ್ನ ಮುಂದಿನ ಗುರಿ: ಪ್ರತಾಪ್ ಸಿಂಹ
ಬೆಂಗಳೂರು Prajatv KannadaBy Prajatv KannadaMarch 15, 2023

ಮೈಸೂರು-ಕುಶಾಲನಗರ ಹೆದ್ದಾರಿ ಕಾಮಗಾರಿಯನ್ನು 2025 ರೊಳಗೆ ಮುಗಿಸುವುದು ನನ್ನ ಮುಂದಿನ ಗುರಿ: ಪ್ರತಾಪ್ ಸಿಂಹ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ಮೈಸೂರು-ಕುಶಾಲನಗರ 4 ಪಥದ ಹೊಸ ಹೆದ್ದಾರಿ ಕಾಮಗಾರಿಯನ್ನು 2025 ರೊಳಗೆ ಮುಗಿಸುವುದು ನನ್ನ ಮುಂದಿನ ಗುರಿ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಬೆಂಗಳೂರು – ಮೈಸೂರು ದಶಪಥ ಲೋಕಾರ್ಪಣೆ ಬೆನ್ನಲ್ಲೇ ಈ ಹೇಳಿಕೆಯನ್ನು ನೀಡಿದ್ದಾರೆ.

ಈ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿಚಾರವನ್ನು ಹಂಚಿಕೊಂಡಿರುವ ಅವರು, ನನ್ನ ಮುಂದಿನ ಗುರಿ ಮೋದೀಜಿ ಭೂಮಿ ಪೂಜೆ ಮಾಡಿದ ಮೈಸೂರು-ಕುಶಾಲನಗರ 4 ಪಥದ ಹೊಸ ಹೆದ್ದಾರಿ ಕಾಮಗಾರಿಯನ್ನು 2025 ರೊಳಗೆ ಮುಗಿಸುವುದು ಮತ್ತು ಮೈಸೂರು-ನಂಜನಗೂಡು ನಡುವಿನ ರಸ್ತೆಯನ್ನು 6 ಪಥಕ್ಕೆ ಹೆಚ್ಚಿಸುವುದಾಗಿದೆ. ನಿಮ್ಮ ಆಶೀರ್ವಾದವಿರಲಿ ಎಂದು ಕೋರಿದ್ದಾರೆ.

ಈ ಕುರಿತಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬರೆದಿರುವ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಸಂದರ್ಭದಲ್ಲಿ ಮೈಸೂರು- ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. 4,128.92 ಕೋಟಿ ರೂ ವೆಚ್ಚದಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಹೆದ್ದಾರಿ ಆರಂಭವಾದಲ್ಲಿ ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಚತುಷ್ಪದ ಹೆದ್ದಾರಿ ನಿರ್ಮಾಣವಾದಲ್ಲಿ ಪ್ರಯಾಣ ಸಮಯವೂ ಇಳಿಕೆಯಾಗಲಿದೆ. ಇನ್ನು ಎರಡನೇಯ ಹಂತದಲ್ಲಿ ಕುಶಾಲನಗರ ಮತ್ತು ಸಂಪಾಜೆ ಹಾಗೂ ಮೂರನೇ ಹಂತದಲ್ಲಿ ಸಂಪಾಜೆಯಿಂದ ಮಾಣಿಗೆ ಹೆದ್ದಾರಿ ನಿರ್ಮಾಣ ಮಾಡುವುದು ಯೋಜನೆಯ ಗುರಿಯಾಗಿದೆ.

ಇನ್ನು ಚಾಮರಾಜನಗರ ಹಾಗೂ ಗುಂಡ್ಲುಪೇಟೆ ಕಡೆಯಿಂದ ತಮಿಳುನಾಡು ಮತ್ತು ಊಟಿ ಕಡೆಯಿಂದ ಬಸ್‌, ಸರಕು ಸಾಗಣೆ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರು-ನಂಜನಗೂಡು ನಡುವಿನ ರಿಂಗ್‌ ರಸ್ತೆ ಜಂಕ್ಷನ್‌ ಮುಖಾಂತರ ಕರ್ನಾಟಕದ ಬೇರೆ ಭಾಗಗಳಿಗೆ ತೆರಳುತ್ತವೆ.

ಮೈಸೂರು-ನಂಜನಗೂಡು ರಸ್ತೆಯಲ್ಲಿಜಂಕ್ಷನ್‌ನ ಬಳಿಯಲ್ಲಿ ಸರ್ವಿಸ್‌ ರಸ್ತೆಗಳಿಲ್ಲ ಎಂಬ ಬಗ್ಗೆಯೂ ಸಾರ್ವಜನಿಕರು ಆಕ್ಷೇಪ ಎತ್ತಿದ್ದಾರೆ. ಇದರಿಂದ ಜಂಕ್ಷನ್‌ನ ಎರಡೂ ಕಡೆಗಳಲ್ಲಿಯೂ ಸ್ಥಳೀಯ ಹಾಗೂ ಹೆದ್ದಾರಿ ಟ್ರಾಫಿಕ್‌ ಸಂದಿಸುವಲ್ಲಿ ಸಂಚಾರ ದುಸ್ತರವಾಗುತ್ತಿದೆ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ.

ಪ್ರತಾಪ್ ಸಿಂಹ ಅವರ ಪೋಸ್ಟ್‌ಗೆ ಕಾಮೆಂಟ್ ಹಾಕಿರುವ ನೆಟ್ಟಿಗರೊಬ್ಬರೂ ಈ ಸಮಸ್ಯೆಯನ್ನು ಉಲ್ಲೇಖಿಸಿದ್ದಾರೆ. ನಂಜನಗೂಡಿಗೆ ಸರ್ವೀಸ್ ರಸ್ತೆ ಇಲ್ಲದಿರುವುದೊಂದು ಕೊರತೆ ಆಗಿದೆ. ಮುಂದಿನ ಯೋಜನೆಯಲ್ಲಿ ಸ್ಥಳೀಯರಿಗೆ ಅನುಕೂಲವಾಗುವಂತೆ ಮೈಸೂರು – ಬೆಂಗಳೂರು ಮಾದರಿಯಲ್ಲಿ ಸರ್ವೀಸ್ ರೋಡ್ ಇದ್ದರೆ ಬಹಳ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದ್ದಾರೆ.

Share. Facebook Twitter WhatsApp Pinterest LinkedIn Tumblr Telegram Email

Related Posts

ಮುದ್ದೇನಹಳ್ಳಿಗೆ ಮೋದಿ ಭೇಟಿ ಹಿನ್ನೆಲೆ: ಇಂದಿನಿಂದ ನಂದಿಗಿರಿಧಾಮಕ್ಕೆ ಪ್ರವೇಶ ನಿಷೇಧ.!

March 24, 2023

ಯಡಿಯೂರಪ್ಪ ಭೇಟಿ ಮಾಡಲು ಕಾವೇರಿ ನಿವಾಸಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

March 24, 2023

ಕೋಲಾರ, ವರುಣಾ ಅಲ್ಲ – ಬಾದಾಮಿಯಿಂದ ಸಿದ್ದರಾಮಯ್ಯ ಸ್ಪರ್ಧೆ?

March 24, 2023

ಬಿಜೆಪಿಯತ್ತ ರೋಷನ್ ಬೇಗ್ ಪುತ್ರ ರುಮಾನ್ ಬೇಗ್ ಚಿತ್ತ! ಶಿವಾಜಿನಗರದಿಂದ ಕಣಕ್ಕಿಳಿಯಲು ಪ್ಲ್ಯಾನ್

March 24, 2023

ಕಾಂಗ್ರೆಸ್ ಆಪರೇಷನ್ ಗೆ ಬಿಜೆಪಿ ವಿಲವಿಲ: BSY ನಂಬಿ ಬಂದಿದ್ದ ವಲಸಿಗರಲ್ಲಿ ಆತಂಕ!

March 24, 2023

ಕೆಂಪೇಗೌಡರು ಕಟ್ಟಿರುವ ಬೆಂಗಳೂರು ಹೆಸರು ಉಳಿಸುವುದು ನಮ್ಮ ಕರ್ತವ್ಯ: ಸಿಎಂ ಬೊಮ್ಮಾಯಿ

March 24, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.