ಮೈಸೂರು ;- ಬೆಂ-ಮೈ ಹೆದ್ದಾರಿ ಅಪಘಾತ ಹಿನ್ನಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಗೆ ಸಂಸದ ಪ್ರತಾಪ್ ಸಿಂಹ ಸಮರ್ಥನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈ ಮೇಲೆ ಏನೋ ಬಂದವರಂತೆ ವಾಹನ ಚಾಲನೆ ಮಾಡುತ್ತಾರೆ. ಆದರೆ ಅವೈಜ್ಞಾನಿಕ ಕಾಮಗಾರಿಯಿಂದ ಅಪಘಾತ ಎಂದು ದೂರುತ್ತಾರೆ. ಮೈಸೂರು-ಬೆಂಗಳೂರು ಹೆದ್ದಾರಿಯನ್ನು ವೈಜ್ಞಾನಿಕವಾಗಿ ನಿರ್ಮಿಸಲಾಗಿದೆ ಎಂದು ಹೇಳಿದರು.
ಹೆದ್ದಾರಿಯಲ್ಲಿ ಮನಬಂದಂತೆ ವಾಹನ ಚಲಾಯಿಸುವ ಬದಲು, ವೇಗದ ಮಿತಿಗೆ ತಕ್ಕಂತೆ ವಾಹನ ಚಲಾಯಿಸಿದ್ರೆ ಅಪಘಾತ ಉಂಟಾಗೊಲ್ಲ. ಇದರ ನಡುವೆಯೂ ಹೈವೇಯಲ್ಲಿ ಏನಾದ್ರೂ ಸಣ್ಣ-ಪುಟ್ಟ ದೋಷಗಳಿದ್ದರೆ, ಆ ಸಮಸ್ಯೆಗಳನ್ನು ಮುಂದಿನ 15 ದಿನಗಳಲ್ಲಿ ಸರಿಪಡಿಸುತ್ತೇವೆ. 6 ತಿಂಗಳಲ್ಲಿ ಯಾವುದೇ ಸಮಸ್ಯೆಗಳಿಲ್ಲದಂತೆ ಹೈವೇಯನ್ನು ಸಜ್ಜಿತಗೊಳಿಸ್ತೇವೆ ಎಂದು ತಿಳಿಸಿದರು.