ಮೈಸೂರು: ನಾನು ಜಮೀರ್ ಅಹ್ಮದ್ರನ್ನು ಎಂದೂ ಕುಳ್ಳ ಎಂದು ಕರೆದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಜಮೀರ್ ಅಹ್ಮದ್ರನ್ನು ಎಂದೂ ಕುಳ್ಳ ಎಂದು ಕರೆದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ತಾಯಿ ಚಾಮುಂಡೇಶ್ವರಿ ಮುಂದೆ ನಿಂತಿದ್ದೇನೆ ಸತ್ಯವನ್ನೇ ಹೇಳುತ್ತಿದ್ದೇನೆ ಎಂದರು.
ಚನ್ನಪಟ್ಟಣದಲ್ಲಿ ಜನತೆಯ ಆಶೀರ್ವಾದವಿದೆ, ಉತ್ತಮವಾದ ರೀತಿಯಲ್ಲಿ ಗೆಲುವು ಸಾಧಿಸುತ್ತೇವೆ. ಜಮೀರ್ ಹೇಳಿಕೆಯಿಂದ ಯಾವ ವ್ಯತ್ಯಾಸವೂ ಆಗುವುದಿಲ್ಲ, ನಾವು ಚನ್ನಪಟ್ಟಣದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನನ್ನ ಮತ್ತು ಜಮೀರ್ ಆತ್ಮೀಯತೆ ರಾಜಕೀಯವಾಗಿ ಮಾತ್ರ. ನಾನು ಅವರನ್ನು ಕುಳ್ಳ ಎಂದು ಕರೆದೇ ಇಲ್ಲ. ಅವರ ಮಾತುಗಳು ಅವರ ಸಂಸ್ಕೃತಿ ತೋರಿಸುತ್ತದೆ. ಸಿಎಂ ಹಾಗೂ ಡಿಸಿಎಂ ಅವರ ಮಾತುಗಳನ್ನು ಸಮರ್ಥಿಸಿಕೊಂಡಿದ್ದಾರೆ. ಈ ಸರ್ಕಾರ ಅನಾಗರೀಕ ಸರ್ಕಾರ. ದುಡ್ಡಿನ ಮದದಿಂದ ಈ ರೀತಿ ಕೊಳ್ಳತ್ತಿದ್ದಾರೆ ಎಂದರು.