ಸಮಂತಾ ಮಾಜಿ ಪತಿ ನಾಗಚೈತನ್ಯ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಶೋಭಿತ ಮನೆಯಲ್ಲಿ ಮದುವೆ ಶಾಸ್ತ್ರ ಶುರು ಆರಂಭವಾಗಿದ್ದು, ಅವುಗಳ ಸಂಭ್ರಮದ ಫೋಟೋಗಳನ್ನು ಶೋಭಿತಾ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ನಾಗಚೈತನ್ಯ ಮನೆಯಲ್ಲಿ ನಾಗಚೈತನ್ಯ ಹಾಗೂ ಶೋಭಿತಾ ಎಂಗೇಜ್ ಮೆಂಟ್ ಮಾಡಲಾಗಿತ್ತು. ಇದೀಗ ಅದ್ದೂರಿಯಾಗಿ ಮದುವೆ ಸಿದ್ದತೆ ನಡೆಯುತ್ತಿದೆ. ಸದ್ದಿಲ್ಲದೆ ಹೆಣ್ಣಿನ ಮನೆಯಲ್ಲಿ ಮದುವೆ ಶಾಸ್ತ್ರ ಆರಂಭವಾಗಿದೆ. ಕೆಂಪು ಬಣ್ಣದ ಸೀರೆಯುಟ್ಟು ನಗುತ್ತಾ ಅರಿಶಿಣವನ್ನು ಕಟ್ಟುವ ಶಾಸ್ತ್ರದಲ್ಲಿ ಶೋಭಿತಾ ಭಾಗಿಯಾಗಿದ್ದಾರೆ.
ನಾಗಚೈತನ್ಯ ಹಾಗೂ ಶೋಭಿತಾ ಮದುವೆ ಯಾವಾಗ? ಎಲ್ಲಿ ಎಂಬುದನ್ನು ಎಲ್ಲೂ ರಿವೀಲ್ ಮಾಡಿಲ್ಲ. ಸದ್ಯದ ಮಾಹಿತಿ ಪ್ರಕಾರ ರಾಜಸ್ಥಾನದಲ್ಲಿ ನಾಗಚೈತನ್ಯ ಮತ್ತು ಶೋಭಿತಾ ಮದುವೆ ನಡೆಯಲಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಕುಟುಂಬದಿಂದ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ.
ನಾಗಚೈತನ್ಯ 2017ರಲ್ಲಿ ನಟಿ ಸಮಂತಾ ಜೊತೆ ಮದುವೆಯಾಗಿದ್ದರು. ಆದರೆ 2021ರಲ್ಲಿ ಕೆಲ ಮನಸ್ತಾಪಗಳಿಂದ ಇಬ್ಬರೂ ಬೇರೆಯಾದರು. 4 ವರ್ಷಗಳ ದಾಂಪತ್ಯಕ್ಕೆ ಇಬ್ಬರೂ ಅಂತ್ಯ ಹಾಡಿದರು. ಇದೀಗ ನಾಗಚೈತನ್ಯ ಎರಡನೇ ಮದುವೆಗೆ ಸಿದ್ದವಾಗಿದ್ದಾರೆ.