ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಪ್ರಕಟ ಮಾಡಿವೆ.
ಬಿಜೆಪಿ ಪಕ್ಷದಿಂದ ಮೇಯರ್ ಅಭ್ಯರ್ಥಿಯಾಗಿ ವೀಣಾ ಭರದ್ವಾಡ ಹಾಗೂ ಉಪಮೇಯರ್ ಸ್ಥಾನಕ್ಕೆ ಸತೀಶ್ ಪ್ರಕಟಿಸಿದ್ದು, ಕಾಂಗ್ರೆಸ್ ಪಕ್ಷದಿಂದ ಮೇಯರ್ ಸ್ಥಾನಕ್ಕೆ ಸುವರ್ಣಾ ಕಲ್ಲಕುಂಟ ಹಾಗೂ ಉಪಮೇಯರ್ ಸ್ಥಾನಕ್ಕೆ ರಾಜು ಕಮತಿಯರನ್ನು ಪಾಲಿಕೆ ಗುದ್ದುಗೆ ಅಖಾಡಕ್ಕೆ ಇಳಿಸಿದೆ.
Video Player
00:00
00:37
ಎರಡು ರಾಷ್ಟ್ರೀಯ ಪಕ್ಷದ ಒಟ್ಟು ನಾಲ್ಕು ಅಭ್ಯರ್ಥಿಗಳು ಈಗ 22ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಕಣದಲ್ಲಿದ್ದು, ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು ಧಾರವಾಡ ಪಾಲಿಕೆ ಕಚೇರಿಯಲ್ಲಿ ನಾಮ ಪತ್ರ ಸಲ್ಲಿಕೆ ಮಾಡಿದರು.