ಬೆಂಗಳೂರು:- ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಕಿಡಿಗೇಡಿಯೊಬ್ಬ ಹಿಂಬದಿಯಿಂದ ಯುವತಿಯ ಖಾಸಗಿ ಅಂಗವನ್ನ ಮುಟ್ಟಿ ಲೈಂಗಿಕ ಕಿರುಕುಳ ಕೊಟ್ಟಿದ್ದಾನೆ. ಈ ಘಟನೆ ಜನವರಿ 1 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕೂಡಲೇ ಯುವತಿ ಅಲ್ಲಿಯರುವ ಭದ್ರತಾ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ. ತಕ್ಷಣವೇ ಅಲರ್ಟ್ ಆದ ಭದ್ರತಾ ಸಿಬ್ಬಂದಿ ಲೈಂಗಿಕ ಕಿರುಕುಳ ಕೊಟ್ಟ ಆಸಾಮಿಯನ್ನ ಹಿಡಿದಿದ್ದು, ಈ ವೇಳೇ ಈ ಕಿಡಿಗೇಡಿ ಯುವತಿಯ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.
ನಮ್ಮ ಮೆಟ್ರೋದಲ್ಲಿ ಕೇವಲ 2 ತಿಂಗಳ ಅಂತರದಲ್ಲಿ ಈ ರೀತಿಯ ಮೂರು ಪ್ರಕರಣ ನಡೆದಿದೆ. ಹೀಗೆ ಪದೇ ಪದೇ ಈ ರೀತಿಯ ಪ್ರಕರಣ ನಡೆಯುತ್ತಿರೋದ್ರಿಂದ ಮೆಟ್ರೋ ಹೆಣ್ಣುಮಕ್ಕಳಿಗೆ ಎಷ್ಟು ಸುರಕ್ಷಿತ ಅನ್ನೋ ಆತಂಕಭರಿತ ಪ್ರಶ್ನೆ ಮೂಡಿದೆ. ಇನ್ನಾದ್ರೂ BMRCL ಅಧಿಕಾರಿಗಳು ಹೆಣ್ಣುಮಕ್ಕಳ ಸುರಕ್ಷತೆಗೆ ಹೆಚ್ಚು ಒತ್ತುಕೊಡುವ ಮೂಲಕ ಜನರಲ್ಲಿ ಆವರಿಸಿರುವ ಭಯವನ್ನ ಹೋಗಲಾಡಿಸಬೇಕಾಗಿದೆ.