ಬೆಂಗಳೂರು : ರಾಜ್ಯದ ಜನತೆಗೆ ಮತ್ತೆ ದರ ಸಿಡಿಲು ಕಾದಿದ್ಯಾ ಎಂಬ ಪ್ರಶ್ನೆ ಉದ್ಭವಿಸಿದೆ. ಕರೆಂಟ್ ಆಯಿತು ಹೋಟೆಲ್ ಮುಗೀತು ಇದೀಗ ನಂದಿನಿ ಹಾಲು ಸರದಿನಾ..? ಎಂಬ ಪ್ರಶ್ನೆ ಎದ್ದಿದೆ. ವಿದ್ಯುತ್ ದರ ಹೆಚ್ಚಳ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಫಿಕ್ಸ್ ಆಗಿದ್ದು, ಶೀಘ್ರದಲ್ಲೇ ಪರಿಷ್ಕರಣೆಯಾಗುತ್ತಾ ನಂದಿನಿ ಹಾಲಿನ ದರ ? ಎಂಬ ಅನುಮಾನ ಮೂಡಿದೆ.
ಹಾಲಿನ ದರ ಏರಿಕೆಗೆ ಹಾಲು ಒಕ್ಕೂಟಗಳಿಂದ ನಿರಂತರ ಸರ್ಕಸ್ ನಡೆಯುತ್ತಿದ್ದು, KERC ಎಲ್ಲಾ ಎಸ್ಕಾಂಗಳ ವಿದ್ಯುತ್ ದರ ಏರಿಕೆಗೆ ಅಸ್ತು ಬೆನ್ನಲ್ಲೇ ಇದೀಗ ಹಾಲು ಒಕ್ಕೂಟಗಳಿಂದ ದರ ಏರಿಕೆಗೆ ಬಿಗಿಪಟ್ಟು ಹಿಡಿಯಲಾಗಿದೆ. ವಿದ್ಯುತ್ ದರದಂತೆ ಹಾಲಿನ ದರವನ್ನೂ ಏರಿಸಲು ರಾಜ್ಯದ 14 ಹಾಲು ಒಕ್ಕೂಟಗಳು ಸರ್ಕಾರದ ಮೇಲೆ ಒತ್ತಡ ಹಾಕಲು ಪ್ಲ್ಯಾನ್ ಮಾಡಿದೆ. ಹೀಗಾಗಿ ಈ ವಾರದೊಳಗೆ ಸಿಎಂ ಸಿದ್ದರಾಮಯ್ಯ ಭೇಟಿಗೆ ಹಾಲು ಒಕ್ಕೂಟಗಳು ನಿರ್ಧಾರ ಮಾಡಿವೆ.
ಈ ಬಗ್ಗೆ KMF ವ್ಯವಸ್ಥಾಪಕ ನಿರ್ದೇಶಕ ಸತೀಶ್ ಜತೆ ಚರ್ಚೆ ನಡೆಸಿರೋ ಒಕ್ಕೂಟಗಳ ಅಧ್ಯಕ್ಷರುಗಳು ಇನ್ನೆರಡು ದಿನಗಳಲ್ಲಿ ಸಿಎಂ ಜೊತೆಗೆ ಚರ್ಚೆ ಮಾಡುವ ಭರವಸೆ ನೀಡಿದ್ದಾರೆ. 14 ಹಾಲು ಒಕ್ಕೂಟಗಳಿಂದ ಪ್ರತಿ ಲೀ.ಗೆ 5 ರೂ. ಏರಿಕೆಗೆ ಮನವಿ ಮಾಡಲು ನಿರ್ಧರಿಸಲಾಗಿದೆ. ಆದ್ರೆ KMF ಸರ್ಕಾರದ ಮುಂದೆ 2 ರಿಂದ 3 ರೂ. ಮಾತ್ರ ಪ್ರಸ್ತಾವನೆ ಸಲ್ಲಿಸಲಿದೆ. KMF ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ರೆ ಹಾಲಿನ ದರ ಏರಿಕೆ ಫಿಕ್ಸ್ ಆಗಿದೆ. ಹೀಗಾಗಲೇ ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಸಿಲಿಂಡರ್, ವಿದ್ಯುತ್ ಬಿಲ್ ದರವೂ ದುಬಾರಿ ಆಗಿದ್ದು, ನಷ್ಟ ಹಾಗೂ ನಿರ್ವಹಣೆ ವೆಚ್ಚ ದುಬಾರಿ ಕಾರಣ ನೀಡಿ ಹಾಲಿನ ದರ ಏರಿಕೆಗೆ ಪ್ಲಾನ್ ಮಾಡಲಾಗಿದೆ.
ಸರ್ಕಾರ ಒಪ್ಪಿಗೆ ಸೂಚಿಸಿದ್ರೆ ಹಾಲಿನ ದರವೂ ದುಬಾರಿ ಆಗುವ ಸಂಭವವಿದೆ. ಶೀಘ್ರದಲ್ಲೇ ಹಾಲಿನ ದರ ಪರಿಷ್ಕರಣೆ ಸಂಬಂಧ ಕೆಎಂಎಫ್ ಅಧಿಕಾರಿಗಳ ಜೊತೆ ಸಿಎಂ ಸಭೆ ಮಾಡಲಿದ್ದು, ಹಾಲಿನ ದರ ಏರಿಕೆ ಸಂಬಂಧ ಸಾಧಕಬಾಧಕಗಳನ್ನ ಚರ್ಚಿಸಲಿದ್ದಾರೆ. ಇನ್ನೂ ಹಾಲಿನ ದರ ಏರಿಕೆಗೆ ಗ್ರೀನ್ ಸಿಗ್ನಲ್ವೋ ರೆಡ್ ಸಿಗ್ನಲ್ವೋ..? ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.