ಐರ್ಲೆಂಡ್ ನ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿರುವ ಸೈಮನ್ ಹ್ಯಾರಿಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಭಾರತ ಮತ್ತು ಐರ್ಲೆಂಡ್ ನಡುವಿನ ಬಾಂಧವ್ಯವನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ “ಐರ್ಲೆಂಡ್ ನ ಅತ್ಯಂತ ಕಿರಿಯ ಪ್ರಧಾನಿಯಾದಕ್ಕಾಗಿ ಸೈಮನ್ ಹ್ಯಾರಿಸ್ ಅವರಿಗೆ ಅಭಿನಂದನೆಗಳು. ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ಹಂಚಿಕೊಂಡ ನಂಬಿಕೆಯ ಆಧಾರದ ಮೇಲೆ ನಮ್ಮ ಐತಿಹಾಸಿಕ ಸಂಬಂಧಗಳನ್ನು ಹೆಚ್ಚು ಗೌರವಿಸುತ್ತೇವೆ. ಭಾರತ-ಐರ್ಲೆಂಡ್ ದ್ವಿಪಕ್ಷೀಯವನ್ನು ಹೆಚ್ಚು ರಕ್ಷಿಸುವ ಕೆಲಸವನ್ನು ಎದುರು ನೋಡಬಹುದಾಗಿದೆ ಎಂದು ಮೋದಿ ಹೇಳಿದ್ದಾರೆ.